ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತರು ದಾಖಲೆಯೊಂದನ್ನು ಬಿಡುಗಡೆ ಮಾಡುವ ಮೂಲಕ ಹೊಸ ತಿರುವು ನೀಡಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಯುಡಿಯೂರಪ್ಪನವರದ್ದು ಹೌದೋ? ಅಲ್ಲವೋ? ಎಂಬ ಗೊಂದಲವಿತ್ತು. ಆದರೆ ಇದೀಗ ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿರುವ ಸಹಿಗೂ ಬಿಎಸ್ ವೈ ಸಹಿಗೂ ವ್ಯತ್ಯಾಸ ಇದೆ ಎಂದು ಸಹಿಯ ಅಸಲಿ, ನಕಲಿ ಬಗ್ಗೆ ದಾಖಲೆಯನ್ನು ಯಡಿಯೂರಪ್ಪ ಆಪ್ತರು ಬಿಡುಗಡೆ ಮಾಡಿದ್ದಾರೆ.
2009ರಲ್ಲಿ ಸಚಿವರಾಗಿದ್ದ ಶರದ್ ಪವಾರ್ ಗೆ ಬಿಎಸ್ ವೈ ಪತ್ರ ಬರೆದಿದ್ದರು. ಈ ಪತ್ರವನ್ನು ಇಂದು ಬಿಎಸ್ ವೈ ಆಪ್ತರು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ರಿಲೀಸ್ ಮಾಡಿದ ಡೈರಿಯಲ್ಲಿರುವ ಸಹಿಗೂ ಈ ಸಹಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಯೂರಿಯಾ ಬಗ್ಗೆ ಜುಲೈ 2009ರಲ್ಲಿ ಬಿಎಸ್ ವೈ ಬರೆದಿದ್ದ ಪತ್ರವನ್ನೂ ಬಿಡುಗಡೆ ಮಾಡುವ ಮೂಲಕ ಸಹಿಯ ಪ್ರತಿ ಅಕ್ಷರ ವ್ಯತ್ಯಾಸ ತೋರಿಸಿ ಮಾರ್ಕ್ ಮಾಡಿ ದಾಖಲೆ ಬಿಡುಗಡೆಗೊಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…