Featured

ಬಿಎಸ್ ವೈ ಶೀಘ್ರವೇ ಸರ್ಕಾರ ರಚನೆ ಮಾಡುತ್ತಾರೆ : ಕೋಟಾ ಶ್ರೀನಿವಾಸ ಪೂಜಾರಿ

ಬೆಳಗಾವಿ: ಬಿ.ಎಸ್.ಯಡಿಯೂರಪ್ಪ ಶೀಘ್ರದಲ್ಲೇ ಸರ್ಕಾರ ರಚಿಸಲಿದ್ದಾರೆ. ಮೈತ್ರಿ ಸರ್ಕಾರದಿಂದ ರಮೇಶ್ ಜಾರಕಿಹೊಳಿ ಮಾನಸಿಕವಾಗಿ ದೂರವಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಗೆ ಬಿಜೆಪಿಗೆ ಬರಬೇಕು ಎಂಬ ಆಸೆ ಇದೆ. ಅವರು ನಮಗೆ ಬೆಂಬಲ ಕೊಡುವ ಭರವಸೆಯಿದೆ. 10 ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ, ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಭಾವನೆ ಎಂದಿದ್ದಾರೆ.

ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ವದಂತಿಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಸರ್ಕಾರ ರಚನೆಯಾದ ಮೇಲೆ ಜಾರಕಿಹೊಳಿ ಸಹೋದರರು ಮಾನಸಿಕವಾಗಿ ನೊಂದಿದ್ದಾರೆ.ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಬಿಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನಕ್ಕೆ ದಿನ ಆರಂಭವಾಗಿದೆ. ನಾವು ಯಾವುದೇ ಆಪರೇಷನ್ ನಡೆಸುವುದಿಲ್ಲ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಿಜೆಪಿ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರದ ಬಗ್ಗೆ ಅನೇಕರಿಗೆ ಗೊಂದಲವಿದೆ. ಹೆಚ್ಚು ದಿನ ಸರ್ಕಾರ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಹೇಳಿದರು. 10ಕ್ಕೂ ಹೆಚ್ಚು ಶಾಸಕರು ಬಂದರೆ ಸರ್ಕಾರ ರಚನೆ ಮಾಡುವುದು ಶತಸಿದ್ಧ. ನಮ್ಮದು ಅತಿದೊಡ್ಡ ಪಕ್ಷವಾಗಿದ್ದು, ಅಸಮಾಧಾನಗೊಂಡಿರುವ ಶಾಸಕರು ಬಿಜೆಪಿಗೆ ಬಂದರೆ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ. ಅದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ, ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆ :

ಕೋಟಾ ಶ್ರೀನಿವಾಸ ಪೂಜಾರಿ ಭವಿಷ್ಯ 

vishwanews24
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago