Featured

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಲುಕ್‌ಔಟ್ ನೋಟಿಸ್ ಜಾರಿ – vishwanews24

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಲುಕ್‌ಔಟ್ ನೋಟಿಸ್ ಜಾರಿ

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಈ ಹಿನ್ನೆಲೆ ಬೈರತಿ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅರೆಸ್ಟ್ ಆಗುವ ಸಾಧ್ಯತೆಯಿದೆ.

ಕಳೆದ ಐದು ದಿನಗಳಿಂದ ಬೈರತಿ ಬಸವರಾಜ್ ನಾಪತ್ತೆಯಾಗಿದ್ದು, ಮಹಾರಾಷ್ಟ್ರ ತಮಿಳುನಾಡು, ಗೋವಾದಲ್ಲಿ ಮೂರು ವಿಶೇಷ ತಂಡಗಳು ಹುಡುಕಾಟ ನಡೆಸಿವೆ. ನಿರೀಕ್ಷಣಾ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಬೈರತಿ ಬಸವರಾಜ್‌ಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡುವ ಮೂಲಕ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಮಂಗಳವಾರ (ಡಿ.೨೩) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಬೈರತಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago