ಬೆಂಗಳೂರು : ನಟ್ಟು ಬೋಲ್ಟು ವಿಚಾರಕ್ಕೂ ಬಿಗ್‌ಬಾಸ್ ಬಂದ್‌ಗೂ ಯಾವುದೇ ಸಂಬoಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಲಿನ್ಯ ನಿಯಂತ್ರಣ ಮಂಡಳಿ ಕೊಟ್ಟ ನೋಟಿಸ್‌ಗೂ ಬಿಗ್‌ಬಾಸ್ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧ ಇಲ್ಲ. ಜಾಲಿವುಡ್ ಮಾಲೀಕರು ಸಿಎಫ್‌ಪಿಸಿಎಫ್‌ಓ ತೆಗೆದುಕೊಂಡಿಲ್ಲ ಅದಕ್ಕೆ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಬೇರೆ ಏನೂ ಇಲ್ಲ. ಈಗ ಅವರು ಹೈಕೋರ್ಟ್‌ಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ನಟ್ಟು ಬೋಲ್ಟು ವಿಚಾರವಾಗಿ ಇದಕ್ಕೂ ಅದಕ್ಕೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪವಿಲ್ಲ” ಎಂದು ತಿಳಿಸಿದರು.
“ಹಲವು ಬಾರಿ ನೋಟಿಸ್ ಕೊಟ್ಟರೂ ಅವರು ಕ್ಯಾರೆ ಎನ್ನಲಿಲ್ಲ. ಹೀಗಾಗಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ. ಟಿವಿ ನೋಡಿ ನನಗೆ ವಿಚಾರ ಗೊತ್ತಾಯ್ತು. ಮಾಲಿನ್ಯ ಇಲಾಖೆಯವರು ಬಂದ್ ಮಾಡಿದ್ದಾರೆ. ಮನರಂಜನೆ ಇರಬೇಕು, ಏನೋ ಸಣ್ಣಪುಟ್ಟ ತಪ್ಪುಗಳು ಆಗಿರುತ್ತವೆ ಎಂದು ನಾನೇ ಡಿಸಿ, ಎಸ್‌ಪಿಗೆ ಕಾಲ್‌ಮಾಡಿ ಹೇಳಿದ್ದೇನೆ. ಪೊಲ್ಯುಷನ್ ಬೋರ್ಡ್ ಜೊತೆಗೂ ಮಾತಾಡಿದ್ದೇನೆ. ಬಿಗ್‌ಬಾಸ್‌ಗೆ ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಹೇಳಿದ್ದೇನೆ. ಸದ್ಯ ಅವರು ಹೈಕೋರ್ಟ್‌ಗೆ ಹೋಗಿದ್ದಾರೆ. ಅಲ್ಲಿ ತೀರ್ಪು ಬಂದ ಮೇಲೆ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…