ಬೆಂಗಳೂರು: ಬಿಗ್‍ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.
ಬಿಗ್‍ಬಾಸ್ ವೇದಿಕೆಯಲ್ಲಿ ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಅವರ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದರು. ಇದೇ ವೇಳೆ ಸುದೀಪ್ ಬಲಕ್ಕೆ ನಿಂತಿದ್ದ ಪ್ರಬಲ ಸ್ಪರ್ಧಿ ಕುರಿ ಪ್ರತಾಪ್ ರನ್ನರ್ ಅಪ್ ಆದರು.
ಶೈನ್, ವಾಸುಕಿ ಮತ್ತು ಕುರಿ ಪ್ರತಾಪ್ ಮಧ್ಯೆ ಭರ್ಜರಿ ಸ್ಪರ್ಧೆ ನಡೆದಿತ್ತು. ಟಾಪ್ 2ನಲ್ಲಿ ವಾಸುಕಿ ವೈಭವ್ ಇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಅವರು ಭೂಮಿ, ದೀಪಿಕಾ ದಾಸ್ ಬಳಿಕ ಭಾನುವಾರದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದರು. ಹೀಗಾಗಿ ವಾಸುಕಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕುರಿ ಪ್ರತಾಪ್ ಅವರು ತಮ್ಮ ಕಾಮಿಡಿ ಮೂಲಕ ಬಿಗ್ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಈ ಮೂಲಕ ಸಾಕಷ್ಟು ಅಭಿಮಾನಿಗಳು ಗಳಿಸಿಕೊಂಡಿದ್ದಾರೆ. ಇತ್ತ ಶೈನ್ ಶೆಟ್ಟಿ ಅವರಿಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ಬಿಗ್ ಪೈಟ್ ನಡೆದಿತ್ತು. ಕೊನೆಗೆ ಆಲ್‍ರೌಂಡರ್ ಶೈನ್ ಶೆಟ್ಟಿ ಬಿಗ್ ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದಾರೆ.
ಕುಂದಾಪುರದ ಹುಡುಗ ಶೈನ್ ಶೆಟ್ಟಿ: ಬಿಗ್‌ಬಾಸ್ ಕನ್ನಡ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಮೂಲತಃ ಕುಂದಾಪುರದವರು. ಬಳಿಕ ಬೆಂಗಳೂರಿಗೆ ಬಂದ ಇವರು ‘ಲಕ್ಷ್ಮೀ ಬಾರಮ್ಮ ಮೀರಾ ಮಾಧವ’ ಧಾರಾವಾಹಿ ಹಾಗೂ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.
ಚಿತ್ರರಂಗದಲ್ಲಿ ಮಿಂಚಬೇಕು ಎಂಬ ಮಹದಾಸೆ ಹೊಂದಿರುವ ಇವರಿಗೆ ಅದೃಷ್ಟ ಸಹಕರಿಸದ್ದರಿಂದ ಅನಿವಾರ್ಯವಾಗಿ ಹೊಟೇಲ್ ಉದ್ಯಮದತ್ತ ಹೊರಳಬೇಕಾಯಿತು.
‘ಗಲ್ಲಿ ಕಿಚನ್’ ಎಂಬ ಫುಡ್ ಟ್ರಕ್ ಆರಂಭಿಸಿ ಜೀವನ ಸಾಗಿಸುತ್ತಿರುವಾಗ ಇವರಿಗೆ ‘ಬಿಗ್‌ಬಾಸ್’ ಸ್ಪರ್ಧಿ ಆಗುವ ಅವಕಾಶ ಒದಗಿ ಬಂತು. ಆಗಿದ್ದಾಗಲಿ ಎಂದು ಬಿಗ್‌ಬಾಸ್ ಮನೆಗೆ ಪ್ರವೇಶಿಸಿದ ಶೈನ್ ಈಗ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…