ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು : ಸುದೀಪ್‌ ಭಾವನಾತ್ಮಕ ಪೋಸ್ಟ್‌ – vishwanews24

Featured, ರಾಜ್ಯ ನ್ಯೂಸ್

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು : ಸುದೀಪ್‌ ಭಾವನಾತ್ಮಕ ಪೋಸ್ಟ್‌

ಬೆಂಗಳೂರು: ಬಿಗ್ ಬಾಸ್  ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್‌ ಹೇಳಿದ್ದಾರೆ.

ಮುಂದಿನ ಭಾನುವಾರ ಬಿಗ್‌ಬಾಸ್‌ 11 ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್‌ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ : ಕಳಸ ಪಿಎಸ್ಐ ನಿತ್ಯಾನಂದ ಗೌಡ ಅಮಾನತು – vishwanews24

ಸುದೀಪ್‌ ಹೇಳಿದ್ದೇನು?
ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್‌ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಈ ಶೋ ನಡೆಯುವ ಮೊದಲು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು.

ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ , ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ : ಟ್ರಂಪ್ ಮಹತ್ವದ ಘೋಷಣೆ – vishwanews24

 

Leave a Reply