ಬೆಂಗಳೂರು: ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಮುಂದಿನ ಭಾನುವಾರ ಬಿಗ್‌ಬಾಸ್ 11 ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಸುದೀಪ್ ಹೇಳಿದ್ದೇನು?
ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.
ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಶೋ ನಡೆಯುವ ಮೊದಲು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…