ಕಾಪು : ಬಿಗ್ ಬಾಸ್ ಕನ್ನಡ ಸೀಸನ್–12 ರಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ರಕ್ಷಿತಾ ಶೆಟ್ಟಿ ಇನ್ನಷ್ಟು ಎತರಕ್ಕೆ ಬೆಳೆದು ಹೆಸರುಗಳಿಸಲಿ ಎಂದು ಶುಭ ಹಾರೈಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ನೀವೆಲ್ಲ ನನ್ನ ಮೇಲೆ ಇಷ್ಟು ಪ್ರೀತಿ, ಬೆಂಬಲ ನೀಡಿದ್ದೀರಿ. ನಿಮ್ಮೆಲ್ಲರ ಆಶೀರ್ವಾದ, ಪ್ರೀತಿಯಿಂದ ನಾನು ರನ್ನರ್ ಅಪ್ ಆಗಿದ್ದೇನೆ. ನನಗೋಸ್ಕರ ಸಮಯ ಕೊಟ್ಟು ಇಷ್ಟೊಂದು ವೋಟ್ ಹಾಕಿದ್ದೀರಿ ಯಾವತ್ತೂ ಮರೆಯುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…