ಬಿಗ್ ಬ್ರೇಕಿಂಗ್! ಎಂ.ಬಿ.ಪಾಟೀಲ್ ರ ಅಕ್ರಮವನ್ನು ದಾಖಲೆಗಳೊಂದಿಗೆ ಬಯಲುಗೆಳೆದ ಬಿ.ಎಸ್.ವೈ..
ಲಿಂಗಾಯತ ಸ್ವತಂತ್ರ ಧರ್ಮ ರಚನೆಯಲ್ಲಿ ಮುಂಚೂಣಿ ವಹಿಸಿದ್ದ ಕರ್ನಾಟಕ ರಾಜ್ಯದ ನೀರಾವರಿ ಸಚಿವ ಎಂ.ಬಿ.ಪಾಟೀಲ್ ರವರ ಹಗರಣವನ್ನು ಬಯಲಿಗೆಳೆದ ಬಿ.ಎಸ್.ಯಡಿಯೂರಪ್ಪ.
ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ, ಬಿ.ಎಸ್.ವೈ ಆರೋಪ!!
ನೀರಾವರಿ ಸಚಿವ ಎಂ.ಬಿ.ಪಾಟೀಲರ ಮೇಲೆ ಗಂಭೀರ ಆರೋಪ ಮಾಡಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪನವರು, ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಭಾರೀ ಅಕ್ರಮ ನಡೆದಿರುವುದಾಗಿ ಆರೋಪ ಮಾಡಿದ್ದು, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ 25 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದಾಗಿ ಹೇಳಿ ದಾಖಲೆ ಬಿಡುಗಡೆ ಮಾಡಿದ್ದಾರೆ.
ಇದರ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪನವರು, ನಮ್ಮ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ, ನಾವೇ ದೇಶದ ನಂಬರ್ 1 ಎಂದು ಹೇಳುವ ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ನಾವು ಬಿಡುಗಡೆ ಮಾಡಿರುವ ದಾಖಲೆಯನ್ನು ದಯವಿಟ್ಟು ನೋಡಿ 24 ಗಂಟೆಯೊಳಗೆ ಉತ್ತರ ಕೊಡಬೇಕು ಎಂದು ಹೇಳುವುದರ ಜೊತೆಗೆ ಹಾಗು ಈ ಗಂಭೀರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದ ಬಿ.ಎಸ್.ಯಡಿಯೂರಪ್ಪ..!!
25 ಕೋಟಿ ಕಿಕ್ ಬ್ಯಾಕ್ ಪಡೆದ ಸಚಿವ ಎಂಬಿ ಪಾಟೀಲ್ ರನ್ನು ಈ ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಎಸ್ ಯಡಿಯೂರಪ್ಪನವರು ಒತ್ತಾಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಹಲವಾರು ಅಕ್ರಮ ನಡೆದಿದೆ ಎಂದರು. ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದರು.
ಸದ್ಯದರಲ್ಲಿಯೇ ಕಾದಿದೆ ಬಿಗ್ ಬ್ರೇಕಿಂಗ್ ನ್ಯೂಸ್..!!
ನೀರಾವರಿ ಸಚಿವ ಎಂ.ಬಿ.ಪಾಟೀಲರ ಹಗರಣ ಬಯಲಿಗೆಳೆದಿರುವ ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರು, ಇನ್ನೆರಡು ದಿನಗಳಲ್ಲಿ ಮತ್ತೊಂದು ದೊಡ್ಡ ಹಗರಣ ಬಯಲಿಗೆ ಎಳೆಯುವೆನು ನಾಳೆ, ನಾಡಿದ್ದು ಕಾದು ನೋಡಿ ಎಂದು ಗುಡುಗಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…