ಬಿಜೆಪಿಗರ ಜೀನ್​ ಪಾಕಿಸ್ತಾನದಲ್ಲಿರಬಹುದು ಆದರೆ, ನನ್ನ ಜೀನ್ ಈ ಮಣ್ಣಿನಲ್ಲಿದೆ : ಎಚ್‌.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು : ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ. ನಿಮ್ಮ ಜೀನ್‌ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಹರಿಹಾಯ್ದಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.

 

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಹೇಳಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago