ಬೆಂಗಳೂರು : ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ. ನಿಮ್ಮ ಜೀನ್‌ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಹರಿಹಾಯ್ದಿದ್ದಾರೆ.
ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.
ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಪ್ರಶ್ನಿಸಿದ್ದಾರೆ.
ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಹೇಳಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…