ಉಡುಪಿ: ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಪ್ರಧಾನಿ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೇಂದ್ರ ಸರಕಾರದ ವಿರುದ್ಧ ಕೆಂಡಕಾರಿದ್ದಾರೆ.
ನನ್ನ ಬಳಿ ಎನ್ ಆರ್ ಸಿಯ ಯಾರಾದರೂ ದಾಖಲೆಗಳನ್ನು ಸಾಬೀತುಪಡಿಸಲು ಕೇಳಿದರೆ ನಾನು ಕೊಡಲು ಹೋಗುವುದಿಲ್ಲ ಯಾಕೆಂದರೆ ನಾನು ಭಾರತೀಯ. ಈ ವಿಚಾರದಲ್ಲಿ ಜೈಲಿಗೆ ಹೋಗಲು ಕೂಡ ಸಿದ್ದನಿದ್ದೇನೆ. ಈ ದೇಶದಲ್ಲಿ ಸುಪ್ರೀಂ ಕೋರ್ಟ್ ಜೀವಂತವಿದ್ದರೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಸಮುದ್ರಕ್ಕೆ ಎಸೆಯಲಿ. ಸುಪ್ರೀ ಕೋರ್ಟ್ ಜನರಿಗೆ ರಕ್ಷಣೆ ಕೊಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಜನವಿರೋಧಿ ದೇಶ ವಿರೋಧಿ ಸಂವಿಧಾನ ವಿರೋಧಿ ಎನ್ ಆರ್ ಸಿ, ಸಿಎಎ ಕಾಯಿದೆ ತರುವ ಮೂಲಕ ಬಿಜೆಪಿ ಭಾರತಕ್ಕೆ ಬೆಂಕಿ ಇಡುತ್ತಿದೆ.
ಭಾರತದಲ್ಲಿ 130 ಕೋಟಿ ಜನರೂ ಸಮಾನರು. ದೇಶದ ಧರ್ಮೀಯರಲ್ಲಿ ಬೇಧ ಭಾವ ಮಾಡಕೂಡದು. ಸಂವಿಧಾನದಲ್ಲಿ ಧಾರ್ಮಿಕ ವಿಭಜನೆಗೆ ಅವಕಾಶವಿಲ್ಲ ಎಂದು ಹೇಳಿದರು.
ಈ ಎರಡು ಕಾಯ್ದೆಯ ಮೂಲಕಬಿಜೆಪಿ ಈ ದೇಶಕ್ಕೆ ಬೆಂಕಿ ಕೊಡುತ್ತಿದೆ. ಜನ ಬೀದಿಗಿಳಿದು ಘರ್ಷಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರಕಾರ ಆರ್ಥಿಕವಾಗಿ ಭಾರತವನ್ನು ನಿರ್ಣಾಮ ಮಾಡಿಯಾಗಿದೆ, ಇದೀಗ ಬಾಂಗ್ಲಾದೇಶದ ಅರ್ಧದಷ್ಟು ಜಿಡಿಪಿಗೆ ಭಾರತ ಇಳಿದಿದೆ. ಇಂದಿರಾಗಾಂಧಿ ಕಟ್ಟಿದ ಬಾಂಗ್ಲಾದೇಶ ಸುಭದ್ರ ಆಗಿದೆ. ಭಾರತದ ಆರ್ಥಿಕ ತಳಹದಿಯೇ ಕುಸಿದಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ, ಮಹಾನ್ ನಾಯಕರು ಎಂದು ಕರೆಸಿಕೊಂಡವರು ಭಾರತವನ್ನು ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಪೌರತ್ವ ಕಾಯ್ದೆಯನ್ನು ಬದಿಗೆ ಹಾಕಬೇಕು- ಬಿಜೆಪಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಮಧ್ವರಾಜ್ ಒತ್ತಾಯಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…