ಮಂಗಳೂರು, : ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿದ್ದು, ಕೇಂದ್ರ ಸರಕಾರ ಮಲಗಿದೆ ಎಂದು ವಿಧಾನ ಪರಿಷತ್‌ನ ಸದಸ್ಯರಾದ ಐವನ್ ಡಿಸೋಜ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ನಡುವೆ ಆರ್‌ಬಿಐನಿಂದ ಹಣವನ್ನು ಹಿಂಪಡೆದಿರುವ ಕೇಂದ್ರ ಸರಕಾರ ದೇಶವನ್ನು ಗಂಡಾಂತರಕ್ಕೆ ತಳ್ಳಿದೆ ಎಂದರು.
ದೇಶವು ತೀವ್ರವಾದ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನದ ಮೂಲಕ ಕೇಂದ್ರ ಸರಕಾರ ಕಾರ್ಪೊರೇಟ್ ಕಂಪನಿಗಳಿಗೆ ಸಹಕರಿಸುತ್ತಿದೆ. ಈ ಮೂಲಕ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಕುತಂತ್ರ ನಡೆಸಿದೆ. ಬ್ಯಾಂಕ್‌ಗಳ ವಿಲೀನೀಕರಣ ದೇಶದ ಜನತೆಗೆ ಮಾಡುವ ದ್ರೋಹ ಎಂದು ಅವರು ಆಪಾದಿಸಿದರು.
ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಹೋರಾಟವನ್ನೂ ನಡೆಸಲಿದೆ. ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗ ಶೀಘ್ರವೇ ಕೇಂದ್ರದ ಹಣಕಾಸು ಸಚಿವರನ್ನು ಈ ವಿಷಯದಲ್ಲಿ ಭೇಟಿ ಮಾಡಲಿದೆ ಎಂದು ಅವರು ಹೇಳಿದರು.
ಬಿಜೆಪಿಗೆ ಪ್ರಚಾರ ಮಾಡಿಯೇ ಗೊತ್ತು ಹೊರತು ವಿಚಾರ ಮಾಡುವುದು ತಿಳಿದಿಲ್ಲ. ಬಿಜೆಪಿಗೆ ಸಲಹೆ ಬರುವುದು ನಾಗಪುರದಿಂದ ಎಂಬಂತೆ ಕಾಣುತ್ತಿದೆ. ಅಲ್ಲಿರುವವರು ಪ್ರಚಾರಕರೇ ಹೊರತು ವಿಚಾರಕರಲ್ಲ. ಪ್ರಧಾನಿಯವರಿಗೆ ಇದಕ್ಕೆಲ್ಲಾ ಸಮಯವೇ ಇಲ್ಲ. ಅವರು ವಿದೇಶದ ಪ್ರವಾಸದಲ್ಲಿ ನಿರತರಾಗಿದ್ದಾರೆ ಎಂದು ಐವನ್ ಡಿಸೋಜ ಟೀಕಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…