ಬಿಜೆಪಿಗೆ ಬಹುಮತ ಇಲ್ಲದಿದ್ದರೂ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಹೊರಟಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ -Vishwanews24
ಬೆಂಗಳೂರು: ಬಿಎಸ್ ಯಡಿಯೂರಪ್ಪ ಶುಕ್ರವಾರ ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿಯಾಗಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಮಯ ನಿಗದಿಪಡಿಸುವಂತೆ ಮನವಿ ಮಾಡಿಕೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಸಂಜೆ 6ಗಂಟೆಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಕೂಡಾ ಬಿಎಸ್ ವೈ ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು- ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು. ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಹುಮತ ಇಲ್ಲದೆ ಇದ್ದರೂ @BSYBJP ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು
ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು-
ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು.
ಸಂವಿಧಾನದ ಮೇಲೆ @BJP4India ಗೆ
ನಂಬಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.@INCKarnataka— Siddaramaiah (@siddaramaiah) July 26, 2019
ಬಿಎಸ್ ವೈ ಇಂದು ಸಂಜೆಯೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ..

