Featured

ಬಿಜೆಪಿಗೆ ಮತ ನೀಡುವವರು ಮುಸ್ಲಿಮರಾಗಿರಲು ಸಾಧ್ಯವೇ ಇಲ್ಲ: ಜಮೀರ್ ಅಹ್ಮದ್

ಹಾವೇರಿ: ‘ಬಿಜೆಪಿಗೆ ಮತ ನೀಡುವವರು ಮುಸ್ಲಿಂ ಆಗಿರಲು ಸಾಧ್ಯವಿಲ್ಲ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದರು.

‘ಬಿಜೆಪಿಗೆ ಮುಸ್ಲಿಮರು ಮತ ಹಾಕುವುದು ದೂರದ ಮಾತು. ಈ ಬಗ್ಗೆ ಆಲೋಚನೆ ಮಾಡುವುದೂ ತಪ್ಪು’ ಎಂದು ಮಂಗಳವಾರ ನಗರಸಭೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ನುಡಿದರು.

‘ಬಿಜೆಪಿಯು ನಮ್ಮನ್ನು ಟಾರ್ಗೆಟ್ ಮಾಡುತ್ತದೆ. ಆದರೆ, ಕಾಂಗ್ರೆಸ್ ಜಾತ್ಯತೀತ ಪಕ್ಷ. ಬಿಜೆಪಿಗೆ ವೋಟು ಹಾಕಿ ಸಮಸ್ಯೆ ಉಂಟು ಮಾಡಿ ಕೊಳ್ಳುತ್ತೀರೋ, ಇಲ್ಲ ಕಾಂಗ್ರೆಸ್‌ಗೆ ವೋಟು ಹಾಕಿ ಅಭಿವೃದ್ಧಿಗೊಳ್ಳುತ್ತೀರೋ’ ಎಂದು ಪ್ರಶ್ನಿಸಿದರು.

‘ಬಿಜೆಪಿಯಿಂದ ಮುಸ್ಲಿಂ ಅಭ್ಯರ್ಥಿಯೇ ಸ್ಪರ್ಧಿಸಿದರೂ, ಆತ ಮುಸ್ಲಿಂ ಎಂದು ನಾನು ಒಪ್ಪಿಕೊಳ್ಳುವುದೇ ಇಲ್ಲ. ಆತನನ್ನು ನಂಬಲೂ ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿಗೆ ಓಟು ಹಾಕಬೇಡಿ. ಆತನನ್ನೂ ‘ಅಲ್ಲಾ’ ಕೂಡಾ ಗಮನಿಸುತ್ತಾರೆ. ಆ ನಿಜವಾದ ಮುಸ್ಲಿಂ ಆಗಿದ್ದರೆ, ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಬೆಂಬಲಿಸುತ್ತಾನೆ’ ಎಂದರು.

ಇದಕ್ಕೂ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೇ ನಮ್ಮೆಲ್ಲರ ನಾಯಕರು. 2022ರ ಚುನಾವಣೆಯ ಬಳಿಕ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ. ಈಗಿನ ಸಮ್ಮಿಶ್ರ ಸರ್ಕಾರವೂ ಐದು ವರ್ಷ ಪೂರೈಸಲಿದೆ’ ಎಂದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

8 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

10 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

11 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

11 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

11 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

11 hours ago