ಹೊಸದಿಲ್ಲಿ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾದರೆ ಪಾಕಿಸ್ತಾನ ಭಾರತ ಸಂಬಂಧ ವೃದ್ಧಿಯಾಗಲಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜಿವಾಲ ಪಾಕಿಸ್ತಾನ ಬಿಜೆಪಿಯೊಂದಿಗೆ ಅಧಿಕೃತ ಸಂಬಂಧ ಹೊಂದಿದೆ, ಬಿಜೆಪಿಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದ ಹಾಗೆ ಎಂದು ಹೇಳಿದ್ದಾರೆ.
‘ಮೋದಿ ಅವರ ಭಾರತೀಯ ಜನತಾ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಒದಗುತ್ತದೆ ಮತ್ತು ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥ ಮಾಡುವುದಕ್ಕೆ ಸಾಧ್ಯವಾಗುತ್ತದೆ’ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಿರುವ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್‌ಜೇವಾಲಾ ಅವರು, ‘ಪಾಕಿಸ್ಥಾನ ಮೋದಿ ಜತೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ಮಾಧ್ಯಮ ವರದಿ ಸಾಕ್ಷಿಯಾಗಿದೆ’ ಎಂದು ಹೇಳಿದರು.
ಟ್ವೀಟ್ ಮಾಡಿರುವ ಸುರ್‌ಜೇವಾಲಾ ಅವರು “ಪಾಕಿಸ್ಥಾನ ಮೋದಿ ಜತೆಗೆ ಅಧಿಕೃತ ಹೊಂದಾಣಿಕೆ ಮಾಡಿಕೊಂಡಿದೆ; ಮೋದಿಗೆ ಓಟ್ ಹಾಕಿದರೆ ಪಾಕಿಸ್ಥಾನಕ್ಕೆ ಓಟ್ ಹಾಕಿದ ಹಾಗೆ’ ಎಂದು ಟೀಕಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…