ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೇ ಮತ ಹಾಕುವಂತೆ ಕರೆ ನೀಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್, ‘ಬಿಜೆಪಿಗೆ ಮತ ಹಾಕುವ ಮುಸ್ಲಿಮರು ಮುಸ್ಲಿಮರೇ ಅಲ್ಲ’ ಎಂದು ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ಆಲ್ ಇಂಡಿಯಾ ಜಮಿಯತ್‌ವುಲ್ ಮನ್ಸೂರ್ ಭಾನುವಾರ ಹಮ್ಮಿಕೊಂಡಿದ್ದ ನದಾಫ್, ಪಿಂಜಾರ ಹಾಗೂ ಮನ್ಸೂರಿ ಸಮಾಜಗಳ ರಾಷ್ಟ್ರೀಯ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಒಂದು ವೇಳೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾದರೆ, ಅಲ್ಪಸಂಖ್ಯಾತರು ಭಯದಲ್ಲಿ ಬದುಕಬೇಕಾಗುತ್ತದೆ. ಆದ್ದರಿಂದ ಜಾತ್ಯತೀತ ತತ್ವದಲ್ಲಿ ನಂಬಿಕೆಯಿರುವ ಪಕ್ಷಕ್ಕೇ ಮತ ಹಾಕಬೇಕು. ಸಮುದಾಯ ಒಗ್ಗಟ್ಟಾಗಿ ಮತ್ತು ಕಡ್ಡಾಯವಾಗಿ ಮತ ಚಲಾಯಿಸಿದರೆ, ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 85 ಲಕ್ಷ ಮುಸ್ಲಿಮರ ಪೈಕಿ 30 ಲಕ್ಷ ನದಾಫ್, ಪಿಂಜಾರರು ಇದ್ದಾರೆ. ಹೀಗಾಗಿ, ಆ ಸಮುದಾಯದ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡ ಲಾಗುವುದು. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ದೇಶದಲ್ಲಿ ಅಸಮಾನತೆ, ಆರ್ಥಿಕ ಸಂಕಷ್ಟ ಸೇರಿದಂತೆ ದೊಡ್ಡ ದೊಡ್ಡ ಸಮಸ್ಯೆಗಳನ್ನು ಹುಟ್ಟು ಹಾಕಿದ್ದಾರೆ. ದೇಶದಲ್ಲಿ ಜಾತ್ಯಾತೀತರು ಮತ್ತು ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕವಂತಹ ವಾತಾವರಣ ನಿರ್ಮಾಣವಾಗಿದೆ. ಬದಲಾವಣೆಗಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿ ಮಾಡಲಾಯಿತು. ಮುಂದೆ ಹೀಗಾಗಬಾರದೆಂದರೆ ಮುಸ್ಲಿಂರು ಜಾತ್ಯಾತೀತ ಪಕ್ಷಕ್ಕೆ ಮತ ಹಾಕಬೇಕು ಎಂದು ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಮಾಜಿ ಸಚಿವ ಆರ್.ಎ. ಉಸ್ಮಾನಿ ಮನ್ಸೂರಿ, ಪಶ್ಚಿಮ ಬಂಗಾಳ ಶಾಸಕ ಮೊಹಿದ್ದೀನ್ ಶಮ್ಸ್, ರಾಷ್ಟ್ರೀಯ ಅಧ್ಯಕ್ಷ ಜಾವೀದ್ ಇಕ್ಬಾಲ್ ಮನ್ಸೂರಿ ಮತ್ತಿತರರು ಉಪಸ್ಥಿತರಿದ್ದರು.
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…