ಬಿಜೆಪಿಗೆ ರಾಮಮಂದಿರ ನಿರ್ಮಾಣದ ವಿಷಯ ಹೊರತುಪಡಿಸಿ ಬೇರೆ ಯಾವುದೇ ಅಜಂಡಾ ಇಲ್ಲ : ದಿನೇಶ್ ಗುಂಡೂರಾವ್ -Vishwanews24

ಉಡುಪಿ: “ಸದಾ ಸುಳ್ಳನ್ನೇ ಸತ್ಯದಂತೆ ಬಿಂಬಿಸುವ ಬಿಜೆಪಿಗೆ, ಮಾತು ಮಾತಿಗೆ ಜೈ ಶ್ರೀರಾಮ್ ಎಂದು ಹೇಳಲು ಯಾವ ನೈತಿಕತೆ ಇದೆ, ಬಿಜೆಪಿಗೆ ರಾಮಮಂದಿರ ನಿರ್ಮಾಣದ ವಿಷಯ ಹೊರತುಪಡಿಸಿ ಬೇರೆ ಯಾವುದೇ ಅಜಂಡಾ ಇಲ್ಲ” ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಂದು ವಾಗ್ದಾಳಿ ನಡೆಸಿದರು.

ಸೋಮವಾರ ಉಡುಪಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ” ಬಿಜೆಪಿಗೆ ರಾಮಮಂದಿರ ನಿರ್ಮಾಣದ ವಿಷಯ ಹೊರತುಪಡಿಸಿ ಬೇರೆ ಯಾವುದೇ ಅಜಂಡಾ ಇಲ್ಲ. ರಾಮ ಮಂದಿರ ನಿರ್ಮಾಣವಾಗುವುದು ಒಳ್ಳೆಯದೆ ಆದರೆ ದೇವರ ಕೆಲಸ , ಧಾರ್ಮಿಕ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರಬೇಕು. ಕೆಲವು ರಾಜಕೀಯ ನಾಯಕರು ಧಾರ್ಮಿಕ ಕೆಲಸಕ್ಕೆ ರಾಜಕೀಯದ ಬಣ್ಣ ಹಚ್ಚಿ ಅವೈಜ್ಞಾನಿಕ ಹೇಳಿಕೆ ನೀಡುತ್ತಿದ್ದಾರೆ. ಮಾತ್ರವಲ್ಲದೆ ಸದಾ ಸುಳ್ಳನ್ನೇ ಸತ್ಯದಂತೆ ಬಿಂಬಿಸುವ ಬಿಜೆಪಿಗೆ,ಮಾತು ಮಾತಿಗೆ ಜೈ ಶ್ರೀರಾಮ್ ಹೇಳಲು ಬಿಜೆಪಿ ಯಾವ ನೈತಿಕತೆ ಇದೆ? ದೇವರ ಹೆಸರಿನಲ್ಲಿ ಮೋದಿಯಿಂದ ಹಿಡಿದು ರಾಜ್ಯದ ಎಲ್ಲಾ ಬಿಜೆಪಿಗರು ಸುಳ್ಳನ್ನೇ ಹೇಳುತ್ತಾರೆ” ಎಂದು ಅವರು ಆರೋಪಿಸಿದರು.

‘ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಕಾಂಗ್ರೆಸ್ ಬಯಲಿಗೆಳೆಯದೆ‌ ಬಿಡುವುದಿಲ್ಲ. ಬಿಜೆಪಿಯ ದುರಾಡಳಿತದ ವಿರುದ್ಧ ಕಾಂಗ್ರೆಸ್ ನ ಹೋರಾಟ ಇಲ್ಲಿಗೆ ಮುಗಿದಿಲ್ಲ. ಬಿಜೆಪಿಗೆ ತಾಕತ್ತಿದ್ದರೆ ನಮ್ಮ ಮೇಲೆ ಡಿಫಮೇಶನ್ ಪ್ರಕರಣ ದಾಖಲಿಸಬಹುದಿತ್ತು. ಅದನ್ನು ಬಿಟ್ಟು ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. ಸರಕಾರದ ಖರೀದಿಯಲ್ಲಿ ಪಾರದರ್ಶಕವಿದ್ದರೆ, ಇದರ ಬಗ್ಗೆ ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಸವಾಲು ಹಾಕಿದರು.

“ಬಿಜೆಪಿ ನೇತೃತ್ವದ ರಾಜ್ಯ ಸರಕಾರ, ಕೇಂದ್ರ ಸರಕಾರ ಬಿಡುಗಡೆ ಮಾಡಿದ ಶೇ50% ಅನುದಾನವನ್ನು ದುರುಪಯೋಗ ಪಡಿಸಿಕೊಂಡಿದೆ. ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ಮಾಹಿತಿ ಇದ್ದು ಸದ್ಯದಲ್ಲೇ ಎಲ್ಲವೂ ಬಹಿರಂಗಗೊಳ್ಳಲಿದೆ. ಸರಕಾರ ಬಿಡುಗಡೆ ಮಾಡಿದ 5 ಕೋಟಿ ರೂ.ಗಳಲ್ಲಿ ಸದ್ಯ 1.45 ರಷ್ಟು ಹಣವನ್ನ ಮಧ್ಯವರ್ತಿಗಳು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಬೇರೆ ರಾಜ್ಯ ಕ್ಕೆ ಹೋಲಿಕೆ ಮಾಡಿದರೆ, ವೈದ್ಯಕೀಯ ಉಪಕರಣಗಳ ಬೆಲೆ ದುಪ್ಪಟ್ಟಾಗಿದ್ದು, ಕಳಪೆ ಮಟ್ಟದ ಉಪಕರಣಗಳನ್ನು ನೀಡಲಾಗಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರಿಗೆ ಘೋಷಣೆ ಮಾಡಿದ ಪ್ಯಾಕೇಜ್ ಇನ್ನು ಎಲ್ಲರಿಗೆ ತಲುಪಿಲ್ಲ. ಕೊರೊನಾ ನೆಪದಲ್ಲಿ ಸರಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಕೊರೊನಾದ ಗಂಭೀರತೆಯ ಬಗ್ಗೆ ಎಚ್ಚರಿಕೆಯನ್ನು ಕೊಟ್ಟಿದ್ದು ಮೊದಲು ಕಾಂಗ್ರೆಸ್. ಎಚ್ಚರಿಕೆ ಕೊಟ್ಟ ರಾಹುಲ್ ಗಾಂಧಿಯನ್ನು ಬಿಜೆಪಿ ನಾಯಕರು ಹೀಯಾಳಿಸಿದರು. ಸರಕಾರವನ್ನು ತೆಗಳುವುದು, ನಿಷ್ಕ್ರೀಯಗೊಳಿಸುವುದು ನಮ್ಮ ಉದ್ದೇಶ ಅಲ್ಲ. ನಾವು ಸಂಕಷ್ಟದಲ್ಲಿರುವ ಜನತೆಗೆ ಅನ್ನ ಆಹಾರ, ಕೊಟ್ಟು ಹೆಲ್ತ್ ವಾರಿಯರ್ ಆಗಿ ಕೆಲಸ ಮಾಡಿದ್ದೇವೆ. ಕಷ್ಟದಲ್ಲಿದ್ದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದೇವೆ. ಅದಕ್ಕಾಗಿ ರಾಜ್ಯದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯಾಗಿದೆ. “ಆರೋಗ್ಯ ಹಸ್ತ ” ಎನ್ನುವ ಕಾರ್ಯಕ್ರಮದ ಮೂಲಕ ಇನ್ನಷ್ಟು ಆರೋಗ್ಯಕ್ಕೆ ಒತ್ತು ನೀಡುವ ಕೆಲಸ ಮಾಡಲಿದ್ದೇವೆ ” ಎಂದರು.

ಈ ಸಂದರ್ಭ ವಿನಯ್ ಕುಮಾರ್ ಸೊರಕೆ, ಮಾಜಿ ಉಸ್ತುವಾರಿ ಸಚಿವರು, ಜಿ ಎ ಬಾವಾ, ಕೆಪಿಸಿಸಿ, ಪ್ರದಾನ ಕಾರ್ಯದರ್ಶಿ, ಅಶೋಕ್ ಕೊಡವೂರು, ಅಧ್ಯಕ್ಷ ರು,ಜಿಲ್ಲಾ ಕಾಂಗ್ರೆಸ್, ನವೀನ್ ಚಂದ್ರ ಜೈನ್, ಅಧ್ಯಕ್ಷ ಬ್ಲಾಕ್‌ ಕಾಂಗ್ರೆಸ್ ಕಾಪು, ಗೀತಾ ವಾಗ್ಳೆ , ಅಧ್ಯಕ್ಷ ರು , ಜಿಲ್ಲಾ ಮಹಿಳಾ ಕಾಂಗ್ರೆಸ್, ಎಂ ಎ ಗಫೂರ್, ಕೆಪಿಸಿಸಿ, ಪ್ರದಾನ ಕಾರ್ಯದರ್ಶಿ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

24 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago