ರಾಯಚೂರು: ಹಿಂದಿನ ಬಾಗಿಲಿನಿಂದ ಯಡಿಯೂರಪ್ಪ ಅವರು ಬಂದು ಅಧಿಕಾರ ಹಿಡಿದು ಕುಳಿತಿದ್ದಾರೆ. ಬಿಜೆಪಿಗೆ ವೋಟು ಕೊಟ್ಟು ಬಿಜೆಪಿಗೆ ವೋಟು ಕೊಟ್ಟು ಇನ್ನೊಮ್ಮೆ ನಮಗೆ ಶಿಕ್ಷೆ ಕೊಡಬೇಡಿ.. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಮನವಿ ಮಾಡಿದ್ದಾರೆ.
ಲಿಂಗಸುಗೂರು ತಾಲೂಕಿನ ಮುದುಗಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರೇ ಕರ್ನಾಟಕದ ಜನರನ್ನ ನಿರ್ಲಕ್ಷ್ಯ ಮಾಡಿದ ನಿಮಗೆ ಜನರ ಶಾಪ ತಟ್ಟದೇ ಇರಲ್ಲ.ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕಿತ್ತು ಅಧಿಕಾರ ಹಿಡಿದು ಕುಳಿತಿದ್ದಾರೆ. ಆದರೆ ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪ ಅವರ ರೆಕ್ಕೆ ಪುಕ್ಕ ಕಟ್ ಮಾಡಿದ್ದಾರೆ. ಕೇಂದ್ರ ಸರ್ಕಾರವೂ ಆರ್ಥಿಕವಾಗಿ ದಿವಾಳಿಯಾಗಿದೆ. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವೂ ದಿವಾಳಿಯಾಗಿದೆ. ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಪ್ರವಾಹದಿಂದ ಹಾನಿಗೊಳಗಾದ ಗ್ರಾಮ, ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದೇನೆ. ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕಾಣದಂತ ನೆರೆ ಆಗಿದೆ. ದಾಖಲೆ ಪ್ರಕಾರ 1914ರಲ್ಲಿ ದೊಡ್ಡ ಪ್ರವಾಹ ಬಂದಿತ್ತು. ಈ ವರ್ಷ ಎದುರಾಗಿರುವ ಪ್ರವಾಹದಿಂದ 8 ಲಕ್ಷ ಜನ ಬೀದಿ ಪಾಲಾಗಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. 80 ಜನ ಸಸಾವನ್ನಪ್ಪಿ,ಹತ್ತಾರು ಜನ ನಾಪತ್ತೆಯಾಗಿ, ಲಕ್ಷಾಂತರ ಮೂಕಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…