Featured

ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್‌.ಮಹೇಶ್‌ ; ಮಹೇಶ್‌ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಿದೆ: ಸಿಎಂ ಬೊಮ್ಮಾಯಿ -Vishwanews24

ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್‌.ಮಹೇಶ್‌ ..

ಮಹೇಶ್‌ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಿದೆ: ಸಿಎಂ ಬೊಮ್ಮಾಯಿ -Vishwanews24

ಕೊಳ್ಳೆಗಾಲ ಶಾಸಕ ಎನ್‌.ಮಹೇಶ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರು: ಕೊಳ್ಳೆಗಾಲ ಶಾಸಕ ಎನ್‌.ಮಹೇಶ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಗುರುವಾರ ಬಿಜೆಪಿಯನ್ನು ಸೇರ್ಪಡೆಗೊಂಡರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದಿಂದ ಗೆದ್ದಿದ್ದ ಮಹೇಶ್‌ ಅವರು ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದರು. ಸರ್ಕಾರದ ಪತನದ ಬಳಿಮ ಅವರು ಬಿಜೆಪಿಯತ್ತ ವಾಲಿದರು. ಈ ಕಾರಣಕ್ಕೆ ಬಿಎಸ್‌ಪಿಯಿಂದ ಅವರನ್ನು ಉಚ್ಚಾಟಿಸಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮಹೇಶ್‌ ಚಳವಳಿಯಿಂದ ಬಂದವರು. ಅವರ ಸಂಘಟನಾ ಶಕ್ತಿ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ಅವರು ಶಾಸಕರಾಗುವ ಮೊದಲೇ ದಲಿತ ಸಮುದಾಯದ ಹೃದಯವನ್ನು ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಒಟ್ಟಾಗಿ ಇವರನ್ನು ಶಾಸಕರನ್ನಾಗಿ ಆರಿಸಿದ್ದಾರೆ. ಇತರ ಜನಾಂಗದವರೂ ಪ್ರೀತಿ ಹೊಂದಿದ್ದಾರೆ ಎಂದರು.

ಮಹೇಶ್‌ ಚಿಂತನೆ ಮತ್ತು ಬಿಜೆಪಿ ಚಿಂತನೆ ವಿಭಿನ್ನ ಅಲ್ಲ. ಸರ್ವೇಜನ ಸುಖಿನೋ ಭವಂತು ಎಂಬ ನಮ್ಮ ಚಿಂತನೆ ಅವರಿಗೆ ಮನವರಿಕೆ ಆದ ಮೇಲೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗುವಾಗ ಸ್ವಯಂ ಪ್ರೇರಣೆಯಿಂದ ಬಂದು, ಬೆಂಬಲ ನೀಡಿದರು ಎಂದರು.

ರಾಜ್ಯದಲ್ಲಿ ಒಳ್ಳೆ ಸರ್ಕಾರ ಬರುತ್ತದೆ, ಯಡಿಯೂರಪ್ಪ ನೇತೃತ್ವದಲ್ಲಿ ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಕೊಡ್ತಾರೆ ಎಂಬ ವಿಶ್ವಾಸವಿಟ್ಟು ಬಂದಿದ್ದಾರೆ. ಅವರ ಎರಡು ವರ್ಷದ ಬಿಜೆಪಿ ಜತೆಗಿನ ಸಂಬಂಧದ ಕಾರಣ ಪಕ್ಷ ಸೇರಲು ನಿರ್ಣಯ ಮಾಡಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಮಹೇಶ್‌ ಸೇವೆ ರಾಜ್ಯಕ್ಕೆ ಆಗಲಿ. ಅಷ್ಟು ಶಕ್ತಿ ಅವರಿಗಿದೆ. ವಿಜಯೇಂದ್ರ ಅವರು ವಾರಕ್ಕೆ ಒಮ್ಮೆ ಆ ಭಾಗದಲ್ಲಿ ಸುತ್ತಾಡಿ ಪಕ್ಷದ ಸಂಘಟನೆಯನ್ನು ಗಟ್ಟಿ ಮಾಡಿದ್ದಾರೆ. ವಿಜಯೇಂದ್ರ ಶ್ರಮಕ್ಕೆ ಮಹೇಶ್‌ ಶಕ್ತಿ ಸೇರಿದರೆ, ಮುಂದಿನ ದಿನಗಳಲ್ಲಿ ಆ ಭಾಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯಬೇರಿ ಭಾರಿಸುತ್ತದೆ. ಯಡಿಯೂರಪ್ಪ ಕಾರಣದಿಂದ ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆಯ ನೆಲೆಗಟ್ಟು ಸ್ಥಾಪನೆ ಆಗಿದೆ. ಇನ್ನೂ ಹಲವು ಸಮುದಾಯದ ನಾಯಕರು ಬಿಜೆಪಿ ಸೇರುತ್ತಾರೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

51 seconds ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 hour ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 hour ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago