ಮೈಸೂರು, : “ರಾಜ್ಯದಲ್ಲಿ ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಅವರು ಕಾರಣ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಪದೇ ಪದೇ ನಮ್ಮ ಪಕ್ಷವನ್ನು ಬಿ ತಂಡ ಎಂದು ಕರೆಯುತ್ತಿದ್ದು, ಬಿಜೆಪಿಗೆ ಹೆಚ್ಚು ಸ್ಥಾನ ಬರುವಂತೆ ಮಾಡಿದ್ದಾರೆ” ಎಂದಿದ್ದಾರೆ.
ಉಪಚುನಾವಣೆಯಲ್ಲಾದ ಸೋಲಿನ ವಿಚಾರವಾಗಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಜಿಡಿಎಸ್ ಅನ್ನು ಹಗುರವಾಗಿ ಕಾಣಬಾರದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ನ ಸೋಲು ಅಥವಾ ಗೆಲುವು ಜೆಡಿಎಸ್ ಪಕ್ಷದ ಮೇಲೆ ಇದೆ ಎನ್ನುವ ವಿಚಾರ ಕಾಂಗ್ರೆಸ್‌ನ ಮಾಜಿ ಸಿಎಂನ ಹೇಳಿಕೆಯಿಂದ ತಿಳಿಯುತ್ತದೆ” ಎಂದು ತಿಳಿಸಿದ್ದಾರೆ.
“ಸಿದ್ದರಾಮಯ್ಯ ಅವರು ಯಾರನ್ನು ಯಾವಾಗ ಭೇಟಿ ಮಾಡುತ್ತಾರೆ ಎನ್ನುವ ವಿಚಾರ ನನಗೆ ತಿಳಿದಿದೆ. ಸಿದ್ದರಾಮಯ್ಯ ಅವರು ಮೊನ್ನೆಯೂ ಕೂಡಾ ಯಾರನ್ನೋ ಭೇಟಿಯಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. ನಾನು ಸಿಎಂ ಅವರನ್ನು ಭೇಟಿ ಮಾಡಿದ್ದರೂ ಕದ್ದಮುಚ್ಚಿ ಭೇಟಿ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…