Featured

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ

ನವದೆಹಲಿ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಅಷ್ಟು ಮಹತ್ವ ಕೊಡುವುದು ಬೇಡ. ವ್ಯತ್ಯಾಸಗಳು ಕಂಡುಬಂದಲ್ಲಿ ಪಕ್ಷದ ಮುಖಂಡರು ನಿಭಾಯಿಸಿಕೊಂಡು ಹೋಗುತ್ತಾರೆ. ಸರ್ಕಾರದ ಸ್ಥಿರತೆಯ ಬಗ್ಗೆ ಯಾವುದೇ ಊಹಾಪೋಹ ಅಗತ್ಯವಿಲ್ಲ ಎಂದು ಹೇಳಿದರು.
ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿದ ದೇವೇಗೌಡರು, ಬಿಜೆಪಿ ಪಕ್ಷ ಈಗಾಗಲೇ ಚುನಾವಣೆಗೆ ಸಜ್ಜಾಗುತ್ತಿರುವುದನ್ನು ಗಮನಿಸಿದರೆ ನವೆಂಬರ್ ಅಥವಾ ಡಿಸೆಂಬರ್‍ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಕಂಡುಬರುತ್ತಿದೆ. ಬಹುಶಃ ಈ ಸಂಸತ್ ಅಧಿವೇಶನ ಕೊನೆಯ ಅಧಿವೇಶನವಾಗಬಹುದು ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಒಂದೇ ಕಾರಣಕ್ಕಾಗಿ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಮೈತ್ರಿ ಮಾಡಿಕೊಂಡಿದ್ದೇವೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದು ನಮ್ಮ ಗುರಿಯಾಗಿದೆ. ಗೊಂದಲಗಳಿದ್ದರೆ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪರಿಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು..
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago