ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಿದರೆ ಸ್ವಾಗತ : ಪ್ರೀತಂ ಗೌಡ -Vishwanews24

Featured, ರಾಜ್ಯ ನ್ಯೂಸ್

ಹಾಸನ: ಮೂರು ತಿಂಗಳಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂಬ‌ ಜೆಡಿಎಸ್ ನಾಯಕರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರೀತಂ ಗೌಡ,  ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಅವರು ಬೆಂಬಲಿಸಿದರೆ ಅಪ್ಪಿಕೊಳ್ಳುತ್ತೇವೆ ಎಂದು ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಿದರೆ ಸ್ವಾಗತ ಎಂದು ಶಾಸಕ ಪ್ರೀತಂ ಗೌಡ ಹಾಸನ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್‌ನವರಿಗೆ ಈಗ ಮನವರಿಕೆಯಾಗಿದೆ ಅನ್ಸುತ್ತೆ. ಅವರು ಬಿಜೆಪಿ ಸರ್ಕಾರಕ್ಕೆ ಬೆಂಬಲ‌‌ ನೀಡಲಿ, ಅಥವಾ ಸರಕಾರದ ಜತೆ ಸೇರಲಿ. ಅವರು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಅವರು ಬೆಂಬಲಿಸಿದರೆ ಅಪ್ಪಿಕೊಳ್ಳುತ್ತೇವೆ ಎಂದು ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಿದರೆ ಸ್ವಾಗತ ಎಂದು ಶಾಸಕ ಪ್ರೀತಂ ಗೌಡ ಹಾಸನ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ನನಗೆ ರಾಜಕೀಯವಾಗಿ ಸ್ವಾತಂತ್ರ್ಯ ದೊರೆತು ನೂರು ದಿನ ಆಗಿದೆ. ಇನ್ನು ಮೂರು ತಿಂಗಳಲ್ಲಿ ಸಾಫ್ಟವೇರ್ ಕಂಪನಿ ತರಲು ಯತ್ನ ನಡೆಯುತ್ತಿದೆ. ಶೀಘ್ರವೇ ಜಿಲ್ಲೆಯಲ್ಲಿ ಕೈಗಾರಿಕೆ‌ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ನಗರದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.