ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಬುಧವಾರ 29 ಸಚಿವರು ಸೇರ್ಪಡೆಯಾಗಿದ್ದಾರೆ. ಆದರೆ, ನೂತನ ಕ್ಯಾಬಿನೆಟ್ ಬಗ್ಗೆ ಭವಿಷ್ಯ ನುಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ , ಬಿಜೆಪಿಯಲ್ಲಿನ ಭಿನ್ನಮತ ಗಮನಿಸಿದರೆ ಶೀಘ್ರದಲ್ಲಿಯೇ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಜೊತೆಗಿನ ಮೂರು ದಿನಗಳ ನಿರಂತರ ಚರ್ಚೆ-ಸಮಾಲೋಚನೆಗಳ ನಂತರ ರಚನೆಯಾದ ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ ಎತ್ತಿಬಂದಂತೆ ಇತ್ತೀಚಿನ ದಿನಗಳಲ್ಲಿ ಮಾತನಾಡುತ್ತಿರುವ ಬಿಜೆಪಿ ರಾಜ್ಯ ಸಚಿವ ಸಂಪುಟ ರಚನೆಯಲ್ಲಿ ದಲಿತ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದೆ. ರಾಜ್ಯದ ಶೇ.24ರಷ್ಟು ಜನಸಂಖ್ಯೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಕೇವಲ ನಾಲ್ಕು ಸಚಿವರನ್ನು ನೀಡಿ ಅನ್ಯಾಯ ಎಸಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು, ನೂತನ ಸಚಿವ ಸಂಪುಟ ರಚನೆಯಲ್ಲಿ ಬಿಜೆಪಿಯೊಳಗಿರುವ ಭಿನ್ನಮತೀಯ ಗುಂಪುಗಳನ್ನು ತೃಪ್ತಿ ಪಡಿಸುವ ಸರ್ಕಸ್ ಕಾಣುತ್ತಿದೆಯೇ ಹೊರತು, ಜನಪರವಾದ ಸಮರ್ಥ ಆಡಳಿತ ನಡೆಸಬೇಕೆಂಬ ಸದುದ್ದೇಶ ಕಾಣುತ್ತಿಲ್ಲ. ಎಲ್ಲರನ್ನೂ ಓಲೈಸಲು ಪ್ರಯತ್ನ ನಡೆಸಿರುವ ಮುಖ್ಯಮಂತ್ರಿಗಳು ಯಾರಿಗೂ ಬೇಡದ ಒಲ್ಲದ ಕೂಸು ಆಗಿರುವಂತೆ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಸಾಮರ್ಥ್ಯ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಪ್ರಾತಿನಿಧ್ಯ, ಸ್ವಚ್ಛ ರಾಜಕಾರಣ ಮೊದಲಾದ ಯಾವ ಧನಾತ್ಮಕ ಅಂಶಗಳು ಹೊಸ ಸಚಿವ ಸಂಪುಟದಲ್ಲಿ ಕಾಣಿಸುತ್ತಿಲ್ಲ. ಇತ್ತೀಚೆಗಷ್ಟೇ ಮೊಟ್ಟೆ ಖರೀದಿ ಹಗರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ನೀಡಿರುವುದು ಪಕ್ಷ ಮತ್ತು ಸಂಘಪರಿವಾರದ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…