ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ನಡೆಸುತ್ತಿದ್ದು ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು? ಎಂದು ಕುಟುಕಿದರು.
ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ. ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ ಎಮದು ತಿಳಿಸಿದರು.
ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ. ಅದಕ್ಕೆ ಕೆಲಸಗಳು ಉಳಿಯುತ್ತವೆ. ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷತ ವರದಿಯನ್ನು ನೀಡಲಿದ್ದಾರೆ ಎಂದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…