Featured

ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ:  ಐವನ್‌ ಡಿಸೋಜ

ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಭದ್ರಗೊಳಿಸಿ ಉತ್ತಮ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಬಿಜೆಪಿ- ಆರೆಸ್ಸೆಸ್‌ ಮಧ್ಯೆ ತಿಕ್ಕಾಟ ಆರಂಭಗೊಂಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಆರೋಪಿಸಿದರು.

ಸಿಎಂ ಅಧಿಕಾರ ವಹಿಸಿದ ಒಂದು ತಿಂಗಳ ಬಳಿಕ ಸಚಿವ ಸಂಪುಟ ರಚನೆಯಾಗಿದೆ. ಈ ಹಿಂದೆ ಇಬ್ಬರು ಡಿಸಿಎಂ ಮಾಡಿದ್ದ ಬಿಜೆಪಿ, ಇದೀಗ ರಾಜ್ಯದ ಇತಿಹಾಸದಲ್ಲಿಪ್ರಥಮ ಬಾರಿ ತ್ರೀಡಿ ಡಿಸಿಎಂಗಳನ್ನು ಮಾಡಿ ನಗೆಪಾಟಲಿಗೀಡಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಸಚಿವ ಸಿ.ಟಿ.ರವಿ ರಾಜೀನಾಮೆಗೆ ಮುಂದಾಗುವ ಮೂಲಕ ಬಿಜೆಪಿ ಬಂಡವಾಳ ಬಯಲಾಗುತ್ತಿದೆ ಎಂದು ಐವನ್‌ ಹೇಳಿದರು.  ಆರು ತಿಂಗಳ ತನಕ ಸಮಸ್ಯೆ ಇಲ್ಲಎಂದವರಿಗೆ ಭ್ರಮನಿರಸನವಾಗಿದೆ. ಅಧಿಕಾರ ಪಡೆದ ತಕ್ಷಣ ದ್ವೇಷದ ರಾಜಕೀಯ ಆರಂಭಿಸಿದ್ದು, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದರು.

ನಮ್ಮಲ್ಲಿಸಮ್ಮಿಶ್ರ ಸರಕಾರ ಮಾತ್ರ ಇತ್ತು. ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ. ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ವಪಕ್ಷದ ನಿಯೋಗವನ್ನಾದರೂ ಕೇಂದ್ರಕ್ಕೆ ಕೊಂಡೊಯ್ಯುವ ಕೆಲಸ ಸರಕಾರದಿಂದ ಆಗಲಿ ಎಂದು ಐವನ್‌ ಆಗ್ರಹಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago