ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಡಿಮ್ಯಾಂಡ್ ಕ್ರಿಯೇಟ್ ಮಾಡುವ ಉದ್ದೇಶದಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಈ ರೀತಿಯ ಆಟ ಆಡುತ್ತಿದ್ದಾರೆ ಎಂದು ಚಿಕ್ಕಮಗಳೂರಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿ ಪಕ್ಷದಿಂದ ಕೆಲವು ಶಾಸಕರು ಹಾಗೂ ಸಂಸದರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಅವರ ಮಾತಿಗೆ ಪ್ರತಿಕ್ರೀಯೆ ನೀಡಿದ ಅವರು ನರೇಂದ್ರ ಮೋದಿಯಂತಹ ನಾಯಕರು ಕಾಂಗ್ರೆಸ್‌ನಲ್ಲಿ ಅಥವಾ ಜೆಡಿಎಸ್ ನಲ್ಲಿ ಸಿಗುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸಂಪರ್ಕದಲ್ಲಿ ಎಷ್ಟು ಜನ ಇದ್ದಾರೆ ಅನ್ನೋದನ್ನ ಹೇಳಲ್ಲ, ಹೆಸರನ್ನು ಹೇಳಲ್ಲ ಇಟ್ಕೋ ನಿನ್ನ ಹತ್ರನೇ, ನಮಗೇನಂತೆ ಒಬ್ಬ ಬಿಜೆಪಿ ಸಿಂಹದಮರಿ ಬರ್ತಾರೆ ಅಂತಾ ಅದ್ರೆ ಹೆಸರು ಹೇಳಲಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದರು.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತ ಬರುತಿದ್ದಾರೆ, ಇವರಿಬ್ಬರೂ ಸ್ವಾರ್ಥಿಗಳು ತಮ್ಮ ಸ್ವಾರ್ಥಕ್ಕಾಗಿ ಎನು ಬೇಕಾದರೂ ಹೇಳಿಕೆ ಕೊಡುತ್ತಾರೆ, ಪಾದಯಾತ್ರೆ ಮಾಡುತ್ತಾರೆ. ಇವರಿಗೆ ಜೆಡಿಎಸ್‌ನಲ್ಲಿ ಅವಕಾಶ ಸಿಕ್ಕಿಲ್ಲವೆಂದು ಪಕ್ಷವನ್ನೇ ಬಿಟ್ಟರು, ಇರೋಧ ಪಕ್ಷದ ನಾಯಕನ ಸ್ಥಾನ ಸಿಗುತ್ತದೆ ಅಂತಾ ಕಾಂಗ್ರೆಸ್‌ಗೆ ಬಂದರು ಅಂದಿನಿಂದ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸ್ಥಾನವನ್ನು ಅಂಲಕರಿಸುತ್ತಾ ಬಂದಿದ್ದಾರೆ, ಕಾಂಗ್ರೆಸ್‌ನಲ್ಲಿ ಇವರನ್ನು ಬಿಟ್ಟರೆ ಬೇರೆ ಯಾರೂ ನಾಯಕರೂ ಇಲ್ಲವೇ? ಎಂದು ಪ್ರಶ್ನಿಸಿದರು.
ಬಿಜೆಪಿಯಂತ ಒಳ್ಳೆಯ ಸೇಬು ಇರುವಾಗ ಕೊಳೆತ ಮಾವಿನ ಹಣ್ಣು ಯಾರಿಗೆ ಬೇಕು, ಬಿಜೆಪಿಯಲ್ಲಿ ಸೇಬಿನಂತಹ ನಾಯಕರು ಇರುವಾಗ ಈ ಪಕ್ಷ ಬಿಟ್ಟು ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…