ಬೆಂಗಳೂರು: ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ ಅಂತ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂಥೆ ಮಹಾ ಸಿಎಂ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಅವರು . ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಅಂತ ಹೇಳಿದರು. ಇದೇ ವೇಳೆ ಅವರು ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ ಗಡಿ ವಿಚಾರದಲ್ಲಿ ಸಿಎಂ ಬಿಎಸ್‌ವೈ ನೀಚ ಕೆಲಸ ಮಾಡುತ್ತಿದ್ದಾರೆ ಅಂತ ಸಿಎಂ ವಿರುದ್ದ ಕಿಡಿಕಾರಿದರು.
ಸೊಲ್ಲಾಪುರ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಎಂದು ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ಮರಾಠ ಏಜೆಂಟ್‌ಗಳು. ನಿನ್ನೆ ಸಮಾವೇಶದಲ್ಲಿ ಅಮಿತ್ ಶಾ ಮರಾಠ ಪೇಟ ಕಟ್ಟಿದ್ದರು. ಒಬ್ಬರಾದ್ರೂ ಈ ಬಗ್ಗೆ ಮಾತಾಡಿದ್ರಾ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದರು.
ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮ ಮಾಡುತ್ತಾರೆ. ಆದ್ರೆ ಮಹಾರಾಷ್ಟ್ರದವರು ಬೆಳಗಾವಿ ಬೇಕು ಅಂತಾರೆ. ಸಿಎಂ ಯಡಿಯೂರಪ್ಪ ಬಹಳ ನೀಚ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಸಿಎಂ ಸಚಿವ ಸಂಪುಟ ಸಭೆಯನ್ನು ಕರೆಯಬೇಕು. ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…