Featured

ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ,  ಕನ್ನಡಿಗರ ಪರವಾಗಿ ಸಿಎಂ ಕೇವಲ ನಾಟಕವಾಡುತ್ತಿದ್ದಾರೆ : ವಾಟಾಳ್‌ ನಾಗರಾಜ್ -Vishwanews24

ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ,  ಕನ್ನಡಿಗರ ಪರವಾಗಿ ಸಿಎಂ ಕೇವಲ ನಾಟಕವಾಡುತ್ತಿದ್ದಾರೆ : ವಾಟಾಳ್‌ ನಾಗರಾಜ್ -Vishwanews24

ಬೆಂಗಳೂರು: ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ ಅಂತ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂಥೆ ಮಹಾ ಸಿಎಂ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಅವರು . ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಅಂತ ಹೇಳಿದರು. ಇದೇ ವೇಳೆ ಅವರು ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ ಗಡಿ ವಿಚಾರದಲ್ಲಿ ಸಿಎಂ ಬಿಎಸ್‌ವೈ ನೀಚ ಕೆಲಸ ಮಾಡುತ್ತಿದ್ದಾರೆ ಅಂತ ಸಿಎಂ ವಿರುದ್ದ ಕಿಡಿಕಾರಿದರು.

ಸೊಲ್ಲಾಪುರ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಎಂದು ವಾಟಾಳ್​ ನಾಗರಾಜ್ ಗುಡುಗಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ಮರಾಠ ಏಜೆಂಟ್‌ಗಳು. ನಿನ್ನೆ ಸಮಾವೇಶದಲ್ಲಿ ಅಮಿತ್ ಶಾ ಮರಾಠ ಪೇಟ ಕಟ್ಟಿದ್ದರು. ಒಬ್ಬರಾದ್ರೂ ಈ ಬಗ್ಗೆ ಮಾತಾಡಿದ್ರಾ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮ ಮಾಡುತ್ತಾರೆ. ಆದ್ರೆ ಮಹಾರಾಷ್ಟ್ರದವರು ಬೆಳಗಾವಿ ಬೇಕು ಅಂತಾರೆ. ಸಿಎಂ ಯಡಿಯೂರಪ್ಪ ಬಹಳ ನೀಚ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಸಿಎಂ ಸಚಿವ ಸಂಪುಟ ಸಭೆಯನ್ನು ಕರೆಯಬೇಕು. ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಹಿಂದೆಯೇ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಇದ್ದಿದ್ದರೆ ಪಾಕಿಸ್ತಾನ ಬೇಕು ಎನ್ನುವವರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದರು : ಸಿ.ಟಿ. ರವಿ -Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago