Featured

ಬಿಜೆಪಿಯವರಿಗಿಂತ ಮುಂಚೆಯೇ ನಾವು ಭಗವದ್ಗೀತೆಯಲ್ಲಿನ ಉತ್ತಮ ಅಂಶಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಿದ್ದೇವೆ : ಡಿ.ಕೆ. ಶಿವಕುಮಾರ್ – VIshwanews24

ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ‌ಮೋದಿ ಅವರು ಬಹುಮಾನ ನೀಡಬೇಕು :

ಯಾರು‌ ಏನೇ ಹೇಳಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ‌ಗಾಂಧಿ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ..

ಕಲಬುರಗಿ: ರಾಜ್ಯ ಬಿಜೆಪಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಕುರಿತು ಪ್ರಜಾವಾಣಿ ಸರಣಿ ವರದಿಗಳನ್ನು ಪ್ರಕಟಿಸುತ್ತಿದ್ದು, ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ‌ಮೋದಿ ಅವರು ಬಹುಮಾನ ನೀಡಬೇಕು ಎಂದು ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ‌ಸಮಿತಿ ಅಧ್ಯಕ್ಷ ‌ಡಿ.ಕೆ. ಶಿವಕುಮಾರ್ ಕುಟುಕಿದರು.

ನಗರದಲ್ಲಿ ಪಕ್ಷದ ‌ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರ ಹೊಲಗಳಿಗೆ ಬೋರ್ ವೆಲ್ ಕೊರೆಸುವ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿದ್ದು, ಪಕ್ಷವು ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರ ಬಿಡುಗಡೆ ‌ಮಾಡಲಿದೆ ಎಂದರು.

ಭಗವದ್ಗೀತೆ ಅಳವಡಿಸಿದ್ದೇ ನಾವು: ರಾಜ್ಯ ಸರ್ಕಾರ ‌ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿಯವರಿಗಿಂತ ಮುಂಚೆಯೇ ನಾವು ಭಗವದ್ಗೀತೆಯಲ್ಲಿನ ಉತ್ತಮ ಅಂಶಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಿದ್ದೇವೆ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ದೂರದರ್ಶನದಲ್ಲಿ ರಾಮಾಯಣ ಧಾರಾವಾಹಿ ಪ್ರಸಾರ ಆರಂಭಿಸಿದರು.‌ ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯ ಅವರು ₹ 2ಕ್ಕೆ ಒಂದರಂತೆ ಭಗವದ್ಗೀತೆಯ ಪ್ರತಿಗಳನ್ನು ಹಂಚಿದರು ಎಂದು ಹೇಳುತ್ತಾ ಭಗವದ್ಗೀತೆಯಲ್ಲಿ ಯದಾ ಯದಾಹಿ ಧರ್ಮಸ್ಯ.. ಶ್ಲೋಕವನ್ನು ಹೇಳಿದರು.

ಯಾರು‌ ಏನೇ ಹೇಳಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ‌ಗಾಂಧಿ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ ಎಂದರು.

ಕೆಪಿಸಿಸಿ‌ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಇದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago