ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಮಾನ ಮರ್ಯಾದೆಯೂ ಇಲ್ಲ: ಈಶ್ವರ್ ಖಂಡ್ರೆ – vishwanews24

Featured, ರಾಜ್ಯ ನ್ಯೂಸ್

ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಮಾನ ಮರ್ಯಾದೆಯೂ ಇಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ  ಬಿಜೆಪಿ  ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನವೆಂಬರ್‌ಗೆ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರ ಪಕ್ಷದ ಪರಿಸ್ಥಿತಿ ಏನಾಗಿದೆ? ಜನರು ಹಾದಿ-ಬೀದಿಯಲ್ಲಿ ಬಿಜೆಪಿಯವರಿಗೆ ಬೈಯುತ್ತಿದ್ದಾರೆ. ಅವರು ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡುತ್ತಿದ್ದಾರೆ. ಅವರಿಗೆ ನೈತಿಕತೆ ಇದೆಯಾ? ಮಾನ ಮರ್ಯಾದೆ ಇದೆಯಾ? ಜನರ ಮುಂದೆ ಅವರು ಹೋಗೋಕೆ ಸಾಧ್ಯವಿದೆಯಾ? ಮೊದಲು ಬಿಜೆಪಿಯಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.

ಉಡುಪಿ: ಬಜೆಟ್ ನಲ್ಲಿ ಯಾವ ವಿಚಾರದಲ್ಲಿ ತೊಡಕುಂಟಾಗಿದೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ : ಸಂಸದ ಕೋಟ – vishwanews24

 

Leave a Reply