Featured

ಬಿಜೆಪಿಯವರಿಗೆ ನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ : ಜಿ.ಪರಮೇಶ್ವರ್ – vishwanews24

ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ ,  ಬಿಜೆಪಿಗೆ ಸಹಿಸಲು ಆಗುತ್ತಿಲ್ಲ  : ಜಿ.ಪರಮೇಶ್ವರ್

ಬೆಂಗಳೂರು : ನಮ್ಮ ಸರ್ಕಾರದ ವಿರುದ್ಧ ಜನರ ಆಕ್ರೋಶ ಇಲ್ಲ. ಬಿಜೆಪಿ ಪಕ್ಷದವರು ಕಾಣೆ ಆಗುತ್ತೇವೆ ಅನ್ನೋ ಭಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಅವರಿನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಇಂದಿನಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಪ್ರಾರಂಭದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, 2 ವರ್ಷಗಳಿಂದ ಒಳ್ಳೆ ಆಡಳಿತ ಕೊಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳನ್ನ ನಾವು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ನಮ್ಮ ಆಡಳಿತ, ಗ್ಯಾರಂಟಿ ಅನುಷ್ಠಾನ ಜನರಿಗೆ ಸಮಾಧಾನ ತಂದಿದೆ ಎಂದು ಹೇಳಿದರು.

ಸಿಎಂ ಅವರು ಬ್ಯಾಲೆನ್ಸ್ ಬಜೆಟ್ ಕೊಟ್ಟಿದ್ದಾರೆ. ಇದಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಬಿಜೆಪಿ ಅವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ತಾವು ಕಳೆದು ಹೋಗುತ್ತೇವೆ ಎಂದು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ. ಬಿಜೆಪಿ ಪಕ್ಷದವರೇ ಆಕ್ರೋಶ ಮಾಡುತ್ತಿದ್ದಾರೆ ಅಷ್ಟೆ. ಆಕ್ರೋಶ ಅಂದರೆ ಜನ ಬೀದಿ ಬೀದಿಯಲ್ಲಿ ಮಾಡಬೇಕು. ನಮ್ಮ ಸರ್ಕಾರದ ವಿರುದ್ಧ ಈ ರೀತಿ ಆಗಿಲ್ಲ. ಬಿಜೆಪಿ ಅವರು ಮಾತ್ರ ಆಕ್ರೋಶ ಮಾಡುತ್ತಿದ್ದಾರೆ. ಅಷ್ಟೇ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago