Featured

ಬಿಜೆಪಿಯವರಿಗೆ ಮಾನ ಮರ್ಯಾದೆಯೂ ಇಲ್ಲ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು; ರೆಬೆಲ್ ಶಾಸಕರನ್ನು ಅನರ್ಹತೆಗೊಳಿಸಿದ ಸ್ಪೀಕರ್ ತೀರ್ಪನ್ನು ವಿರೋಧಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ,  ಮಾನ ಮರ್ಯಾದೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ..

ಸೋಮವಾರ ಬಿಜೆಪಿ ವಿಶ್ವಾಸಮತ ಯಾಚನೆ ಹಿನ್ನೆಲೆ ವಿಧಾನಸೌಧದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, “ಸ್ಪೀಕರ್ ಆದೇಶವನ್ನ ಬಿಜೆಪಿಯವರು ವಿರೋಧಿಸಿದ್ದಾರೆ. ಆದರೆ, ಅತೃಪ್ತ ಶಾಸಕರ ಮೇಲೆ ಅವರಿಗೆ ಯಾಕೆ ಇಷ್ಟು ಕಾಳಜಿ ಎಂದು ಅರ್ಥವಾಗುತ್ತಿಲ್ಲ. ಅಸಲಿಗೆ ಸ್ಪೀಕರ್ ತೀರ್ಪು ಪಕ್ಷಾಂತರ ಮಾಡುವವರಿಗೆ ಇದು ಶಾಸ್ತಿ. ಅವರ ತೀರ್ಪನ್ನು ಬಿಜೆಪಿ ನಾಯಕರು ಶ್ಲಾಘಿಸಬೇಕಿತ್ತು. ಅದನ್ನು ಬಿಟ್ಟು ತೀರ್ಪನ್ನು ವಿರೋಧಿಸುವುದು ಸರಿಯಲ್ಲ. ಅವರ ಅವಧಿಯಲ್ಲಿ ಸ್ಪೀಕರ್ ಕೆ.ಜಿ. ಬೋಪಯ್ಯ ಕಾನೂನು ಬಾಹೀರವಾದ ತೀರ್ಪು ನೀಡಿದ್ದರು. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಪನ್ನು ವಿರೋಧಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಉಳಿದಿಲ್ಲ, ಅವ್ರಿಗೆ ಮಾನ ಮರ್ಯಾದೆಯೂ ಇಲ್ಲ” ಎಂದು ಕಿಡಿಕಾರಿದ್ದಾರೆ.

ಬಂಡಾಯದ ಬಾವುಟ ಹಾರಿಸಿದ್ದ ಕಾಂಗ್ರೆಸ್‌-ಜೆಡಿಎಸ್‌ನ ಎಲ್ಲ 17 ಶಾಸಕರು ಅನರ್ಹಗೊಳಿಸುವ ಮಹತ್ವದ ತೀರ್ಮಾನವನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಪ್ರಕಟಿಸಿದ್ದಾರೆ. ಕಳೆದ ಗುರುವಾರ ಮೂವರನ್ನು ಅನರ್ಹಗೊಳಿಸಿದ್ದ ಅವರು ಭಾನುವಾರ ಉಳಿದ 14 ಮಂದಿಯನ್ನು ಶಾಸಕತ್ವದಿಂದ ಮುಕ್ತಗೊಳಿಸಿದ್ದಾರೆ. ಇದರಿಂದಾಗಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವುದು ಸರಾಗವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್‌ ತೀರ್ಮಾನದಿಂದ ಬಂಡಾಯಗಾರರ ಭವಿಷ್ಯ ಡೋಲಾಯಮಾನವಾಗಿದ್ದರೂ ಬಿಜೆಪಿಗೆ ಇದು ವರದಾನವಾದಂತಾಗಿದೆ. ವಿಶ್ವಾಸಮತ ಸಾಬೀತಿನಲ್ಲಿ ಹೊಸ ಸರಕಾರ ಯಶಸ್ವಿಯಾದರೆ ಮುಂದಿನ 6 ತಿಂಗಳು ನಿರಾತಂಕವಾಗಲಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago