Featured

ಬಿಜೆಪಿಯವರಿಗೆ ರಾಜಕೀಯಕ್ಕಾಗಿ ʼಧರ್ಮಸ್ಥಳʼ ಬೇಕಾಗಿದೆ : ಡಿ.ಕೆ.ಶಿವಕುಮಾರ್ – vishwanews24

ಬಿಜೆಪಿಯವರಿಗೆ ರಾಜಕೀಯಕ್ಕಾಗಿ ʼಧರ್ಮಸ್ಥಳʼ ಬೇಕಾಗಿದೆ..

ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ..

ಬಿಜೆಪಿಯವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ : ಡಿ.ಕೆ.ಶಿ ವಾಗ್ದಾಳಿ

ಬೆಂಗಳೂರು : “ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ ಏನೂ ಮಾತನಾಡಿರಲಿಲ್ಲ. ಈಗ ರಾಜಕಾರಣ ಮಾಡುತ್ತಿದ್ದಾರೆ. ಅವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ. ಇದು ಯಾರೊಬ್ಬರ ಆಸ್ತಿಯಲ್ಲ. ಅವರವರ ಭಕ್ತಿ, ನಂಬಿಕೆ ಭಾವನೆಗೆ ಸಂಬಂಧಿಸಿದ್ದು. ಬಿಜೆಪಿಯವರದ್ದು ರಾಜಕಾರಣ ಬಿಟ್ಟರೆ ಬೇರೇನೂ ಇಲ್ಲ” ಎಂದು ಟೀಕಿಸಿದರು.

“ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ? ಎಸ್ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ ಎನ್ನುವವರು ನಾವು. ನ್ಯಾಯಾಲಯದ ಮುಂದೆ ದೂರು ನೀಡಿದ ನಂತರವೂ ಸರಕಾರ ತನಿಖೆ ಮಾಡದಿದ್ದರೇ ಬಿಜೆಪಿಯವರು ಏನು ಹೇಳುತ್ತಿದ್ದರು? ಅವರೇ ಟೀಕೆ ಮಾಡುತ್ತಿರಲಿಲ್ಲವೇ? ಈಗ ಈ ರೀತಿ ರಾಜಕಾರಣ ಮಾಡುತ್ತಿದ್ದು, ನಾವು ಇದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

ಮುಸುಕುಧಾರಿ ದೂರುದಾರನಿಗೆ ಮಂಪರು ಪರೀಕ್ಷೆ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಅವರು ಏನಾದರೂ ಆಗ್ರಹ ಮಾಡಲಿ, ಮಂಪರು ಪರೀಕ್ಷೆ ಅಥವಾ ಬೇರೆ ಯಾವುದೇ ತನಿಖೆಗೆ ಬೇಕಾದರೂ ಆಗ್ರಹಿಸಲಿ. ಅದು ತಪ್ಪಲ್ಲ. ಎಸ್ಐಟಿ ತನಿಖೆ ಸ್ವಾಗತಿಸಿದವರು ಇಂದು ಈ ರೀತಿ ಮಾತನಾಡುತ್ತಿದ್ದಾರೆ. ಎಷ್ಟು ಗುಂಡಿ ತೆಗೆಯಬೇಕು, ಬೇಡ ಎಂದು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ. ಅವರ ತನಿಖೆಯಲ್ಲಿ ನಾವೇಕೆ ಹಸ್ತಕ್ಷೇಪ ಮಾಡಬೇಕು?” ಎಂದು ಮರುಪ್ರಶ್ನಿಸಿದರು.

ನಿಮ್ಮ ಷಡ್ಯಂತ್ರ ಹೇಳಿಕೆಯನ್ನು ಬಿಜೆಪಿ ನಾಯಕರು ಸ್ವಾಗತ ಮಾಡಿದ್ದಾರೆ ಎಂದು ಕೇಳಿದಾಗ, “ನನಗೆ ವೈಯಕ್ತಿಕವಾಗಿ ಇರುವ ಅನುಭವದ ವಿಚಾರ ನಾನು ಹೇಳಿದ್ದೇನೆ. ಆದರೆ ಸರಕಾರಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ನನಗೆ ಇಷ್ಟವಿಲ್ಲ. ಬಿಜೆಪಿ ಶಾಸಕರು ಸದನದಲ್ಲಿ ಮಾತನಾಡಿರಬಹುದು. ಅದಕ್ಕೂ ಮುನ್ನ ನಮ್ಮ ಶಾಸಕರು ಶಾಸಕಾಂಗ ಸಭೆಯಲ್ಲೇ ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಆ ಭಾಗದ ಕಾಂಗ್ರೆಸ್ ನಾಯಕರು ಆರಂಭದಲ್ಲೇ ಬಂದು ನಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಧಿಕಾರದಲ್ಲಿರುವ ಸರಕಾರ ಈ ವಿಚಾರವನ್ನು ಚರ್ಚಿಸಬಾರದು ಎಂದು ಮಾತನಾಡಿರಲಿಲ್ಲ. ನಮ್ಮ ಮುಖ್ಯಮಂತ್ರಿಗಳು ಕೂಡ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಕಾನೂನು ಪ್ರಕಾರ ತನಿಖೆ ಆಗುತ್ತದೆ. ತಪ್ಪು ಸಂದೇಶ ನೀಡಿ, ಅಪಪ್ರಚಾರ ಮಾಡಿದ್ದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಕುಮ್ಮಕ್ಕು ನೀಡುತ್ತಿರುವವನು ಮುಖ್ಯಮಂತ್ರಿಗಳನ್ನೇ ಕೊಲೆಗಾರ ಎಂದಿದ್ದಾನೆ. ಆತನ ಬಗ್ಗೆ ನೀವು ವರದಿ ಮಾಡಿದ್ದೀರಾ? ಇದೆಲ್ಲದರ ಮಾಹಿತಿ ನಮ್ಮ ಬಳಿ ಇದೆ” ಎಂದು ಹೇಳಿದರು.

ಗುಂಡಿ ಅಗೆಯುವುದನ್ನು ನಿಲ್ಲಿಸುತ್ತೀರಾ ಎಂದು ಕೇಳಿದಾಗ, “ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾರು ತನಿಖೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇದಕ್ಕೆಂದು ಗೃಹ ಸಚಿವರಿದ್ದು, ಅವರು ನಿಭಾಯಿಸುತ್ತಾರೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ನಾವು ನಮ್ಮ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತೇವೆ. ಅಲ್ಲಿ ನೂರಾರು ಜನ ಇರುತ್ತಾರೆ, ನಮಗೆ ಪೊಲೀಸರಿಂದಲೇ ಮಾಹಿತಿ ಬರಬೇಕು ಎಂದೇನಿಲ್ಲ” ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago