Featured

ಬಿಜೆಪಿಯವರು ನಿಜವಾದ ಟೆರರಿಸ್ಟ್‌ಗಳು : ಮತ್ತೊಮ್ಮೆ ವಿವಾದಕ್ಕೊಳಗಾದ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಬಿಜೆಪಿಯವರು  ನಿಜವಾದ ಟೆರರಿಸ್ಟ್‌ಗಳು, ಸನಾತನ ಧರ್ಮದ ಹೆಸರಿನಲ್ಲಿ ಉಗ್ರವಾದ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿ-ಆರ್‌ಎಸ್‌ಎಸ್‌ನವರು ಬಲಪಂಥೀಯ ಹೆಸರಿನಲ್ಲಿ ಉಗ್ರವಾದ ಮಾಡುವವರು. ಪ್ರಗತಿಪರ ಚಿಂತನೆ ಇಲ್ಲದವರು. ಗೌರಿ ಲಂಕೇಶ್ ಹತ್ಯೆಯ ಹಿಂದೆ ಯಾರಿದ್ದಾರೆ ಅಂತಾ ಗೊತ್ತಾಗಿದೆ ಎಂದರು.

ಗೌರಿ ಲಂಕೇಶ್‌, ದಾಬೋಲ್ಕರ್, ಪನ್ಸಾರೆ ಹತ್ಯೆ ಮಾಡಿದವರ ಬಗ್ಗೆ ನಮ್ಮ ಪೊಲೀಸರು ಎಳೆಎಳೆಯಾಗಿ ಬಿಚ್ಚಿಡ್ತಿದ್ದಾರೆ. ನಾಲ್ಕು ವರ್ಷಗಳಿಂದ ಕಂಡು ಹಿಡಿಯದಿದ್ದ ಕೇಸ್ ಬಗ್ಗೆ ಮಾಹಿತಿ ಈಗ ಸಿಕ್ಕಿದೆ. ಇದರ ಹಿಂದಿರುವವರು ಯಾರು ಅನ್ನೋದು ಜಗತ್ತಿಗೇ ಗೊತ್ತಾಗಿದೆ. ಗೌರಿ ಹಂತಕರನ್ನು ಹಿಡಿಯುವ ಕೆಲಸ ನಮ್ಮ ಸರ್ಕಾರ ಮಾಡಿತು. ಆದ್ರೆ ಮಹಾರಾಷ್ಟ್ರ ಸರ್ಕಾರ ಪನ್ಸಾರೆ ಮತ್ತು ದಾಬೋಲ್ಕರ್ ಕೊಲೆ ಮಾಡಿದವರ ಬಗ್ಗೆ ಚಕಾರ ಎತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಬಿಜೆಪಿಯವರೂ ಸಹ ಭಯೋತ್ಪಾದಕರಷ್ಟೇ ಕ್ರೂರ. ಅದೇ ಒಬ್ಬ ಮುಸ್ಲಿಂ ಇಂತಹ ಕೃತ್ಯ ಮಾಡಿದ್ರೆ ಸುಮ್ಮನೆ ಬಿಡುತ್ತಿದ್ರಾ? ಐಸಿಸ್ ಉಗ್ರ ಸಂಘಟನೆ ಪಾತ್ರ ಇದ್ದಿದ್ರೆ ಪ್ರತಿ ದಿನ ಚರ್ಚೆ ಆಗುತ್ತಿತ್ತು. ವಾಜಪೇಯಿ ಅಂತ್ಯ ಸಂಸ್ಕಾರಕ್ಕೆ ಹೋದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಯಾರೂ ಇವರ ವಿರುದ್ಧ ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡ್ತಾರೆ. ಇವರನ್ನು ಟೆರರಿಸ್ಟ್ ಅನ್ನದೇ ಬೇರೆ ದಾರಿಯಿಲ್ಲ ಎಂದು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ದಿನೇಶ್ ಗುಂಡುರಾವ್ ಗಂಭೀರ ಆರೋಪ ಮಾಡಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago