Featured

ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ : ಡಿ.ಕೆ ಶಿ – vishwanews24

ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ : ಡಿ.ಕೆ ಶಿ

ಬೆಂಗಳೂರು: ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ  ಸಂಬಂಧ ಸಿಬಿಐ (CBI) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಈ ವೇಳೆ, ನಾವೆಲ್ಲಾ ಕಷ್ಟ ಪಟ್ಟು ಶ್ರಮ ಪಟ್ಟು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಬಿಜೆಪಿ ಸರ್ಕಾರ ಸಾಕಷ್ಟು ಷಡ್ಯಂತ್ರ ಮಾಡಿದೆ. ಸಾವಿರಾರು ಕೇಸ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.

ನಾನು ಏನೂ ತಪ್ಪು ಮಾಡಿಲ್ಲ ಎಂದು ಅಂದೇ ಹೇಳಿದ್ದೆ. ಈಗ ನನಗೆ ಜಯ ಸಿಕ್ಕಿದೆ. ನನ್ನ ಪರವಾಗಿ ನಿಂತ ಸರ್ಕಾರಕ್ಕೆ, ನನ್ನ ಪರ ವಾದ ಮಾಡಿದ ವಕೀಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

ಸಿಬಿಐನವರೆ ಈ ಪ್ರಕರಣಕ್ಕೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‍ಗಳನ್ನ ಎದುರಿಸಲೇಬೇಕು. ಅದು ಗೊತ್ತಿದೆ ಅವರು ನನ್ನ ಬಿಡಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

3 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

3 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

4 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

6 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

6 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

6 hours ago