ಕಲಬುರಗಿ :ಬಿಜೆಪಿಯವರು ಧರ್ಮ ಮತ್ತು ಮೋದಿಯ ಹೆಸರಲ್ಲಿ ಚುನಾವಣೆ ಗೆಲ್ಲುವ ಕನಸಲ್ಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನ ಮೇಲೆ 40 ಕೇಸು ಹಾಕಿದ್ದು ಬಿಜೆಪಿ ಸರ್ಕಾರ. ಅವನನ್ನು ಬಿಜೆಪಿ ಸರ್ಕಾರವೇ ಗಡಿಪಾರು ಮಾಡಿದ್ದು. ಈಗ ಅವನನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದರು.
ಇನ್ನು ಮೋದಿ ಫೋಟೋ ತೋರಿಸಿ, ಧರ್ಮದ ಆಧಾರದ ಮೇಲೆ ಪ್ರಚಾರ ಮಾಡಿ ಹಾಗೂ ಸ್ವಲ್ಪ ಹಣ ಖರ್ಚು ಮಾಡಿದರೆ ಯಾರೂ ಬೇಕಾದರೂ ಚಿತ್ತಾಪುರದಲ್ಲಿ ಚುನಾವಣೆ ಗೆಲ್ಲಬಹುದು ಎಂದು ಬಿಜೆಪಿಗರು ತಿಳಿದಂತಿದೆ. ಅಸಮರ್ಥ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ನೀವು ಕೇಂದ್ರ ಬಿಜೆಪಿಗರಿಗೆ ಸಂದೇಶ ರವಾನಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಕ್ರಮ ಅಕ್ಕಿ ಹಾಗೂ ಅಂಗನವಾಡಿಯಲ್ಲಿ ಮಕ್ಕಳಿಗೆ ಕೊಡುವ ಹಾಲಿನ ಪುಡಿಯನ್ನು ಕದ್ದು ಮಾಡಿ ಮಾರಾಟ ಮಾಡಿದಂತವರನ್ನು ನೀವು ಆಯ್ಕೆ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ನನಗೆ ಚಿತ್ತಾಪುರ ಕ್ಷೇತ್ರದ ಜನರ ಕುರಿತು ಕಾಳಜಿ ಇದೆ. ಕೊರೋನಾ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಿಂದ ಬೆಡ್ ಖರೀದಿಸಿ ತಂದು ಇಲ್ಲಿನ ಜನರಿಗೆ ಒದಗಿಸಿದ್ದೇನೆ. ಅದಕ್ಕಾಗಿ ನನ್ನ ಮೇಲೆ ಕೇಸ್ ದಾಖಲಾಗಿದೆ. ಆದರೆ ಮಣಿಕಂಠನ ಮೇಲೆ ಅಕ್ರಮ ಅಕ್ಕಿ ಸಾಗಾಣಿಕೆ ಮಾಡಿದ್ದಕ್ಕೆ ಕೇಸು ದಾಖಲಾಗಿವೆ. ನಿಮಗೆ ಜನಪರ ಕೆಲಸ ಮಾಡುವ ನಾನು ಬೇಕೋ? ಅಕ್ರಮ ಕೆಲಸದಲ್ಲಿ ತೊಡಗಿರುವ ಬಿಜೆಪಿ ಅಭ್ಯರ್ಥಿ ಬೇಕಾ? ನಿರ್ಧರಿಸಿ ಎಂದಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…