ಬಿಜೆಪಿಯವರು ಯಾವಾಗಲೂ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತ ಬಂದಿದ್ದಾರೆ : ಡಿ.ಕೆ. ಶಿ -Vishwanews24

ಬಿಜೆಪಿಯವರು ಯಾವಾಗಲೂ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತ ಬಂದಿದ್ದಾರೆ : ಡಿ.ಕೆ. ಶಿ -Vishwanews24

ಕಲಬುರ್ಗಿ: ಸಿಬಿಐ ಅಧಿಕಾರಿಗಳು ನನ್ನ ಮಗಳ ನಿಶ್ಚಿತಾರ್ಥದಂದೆ ನನಗೆ ನೋಟಿಸ್ ನೀಡಿದ್ದು, ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ಮಿತಿಮೀರಿದೆ ಆದರೆ ನನಗೆ ತೊಂದರೆ ಕೊಟ್ಟವರು ಯಾವಾಗಲೂ ಖುಷಿಯಾಗಿರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‌ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ನಮ್ಮ ಇಡೀ ಕರ್ನಾಟಕದಲ್ಲಿ ಯಾವ ಶಾಸಕರಿಗೂ ನೋಟಿಸ್ ನೀಡಿಲ್ಲ ಆದರೆ ನನಗೆ ಮಾತ್ರ ನೀಡಿದ್ದಾರೆ. ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣವನ್ನು ನನ್ನೊಬ್ಬನ ಮೇಲೆ ಯಾಕೆ ಮಾಡುತ್ತಿದ್ದಾರೆ, ಅಷ್ಟೆ ಅಲ್ಲದೇ ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟಿಸ್ ಕೊಡುತ್ತಾರೆ ಅಂದರೆ ಅವರ ದ್ವೇಷ ಎಷ್ಟರಮಟ್ಟಿಗಿದೆ ಅನ್ನೋದು ಅರ್ಥವಾಗುತ್ತದೆ ಎಂದರು”.

ಇನ್ನು “ಬಿಜೆಪಿಯವರು ಯಾವಾಗಲೂ ನನ್ನ ವಿರುದ್ಧ ದ್ವೇಷದ ರಾಜಕಾರಣವೇ ಮಾಡುತ್ತ ಬಂದಿದ್ದಾರೆ. ಎಫ್‌ಐಆರ್ ಹಾಕುವ ಜೊತೆಗೆ ನೋಟಿಸ್ ಸಹ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ರಾಜಕೀಯದ ಕುಮ್ಮಕ್ಕಿಲ್ಲದೆ ಸಿಬಿಐ ಅಧಿಕಾರಿಗಳು ಈ ರೀತಿ ವರ್ತಿಸುತ್ತಿರಲಿಲ್ಲ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಆದರೆ ನ್ಯಾಯ ಸಮ್ಮತ ತನಿಖೆ ನಡೆಸಬೇಕು, ನಾನು ಕಾನೂನಿಗೆ ಗೌರವ ಕೊಡುತ್ತೇನೆ “ಎಂದು ಹೇಳಿದ್ದಾರೆ.ಅವರು ಏನು ಬೇಕಾದ್ರೂ ಮಾಡಿಕೊಳ್ಳಲಿ. ಆದರೆ ನ್ಯಾಯ ಸಮ್ಮತ ತನಿಖೆ ನಡೆಸಲಿ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಯಾರೂ ಗಾಬರಿಪಟ್ಟುಕೊಳ್ಳಬೇಡಿ, ಸಿಬಿಐ ಕಚೇರಿ ಕಡೆ ಬರಬೇಡಿ. ನನ್ನ ಪರವಾದ ಹೇಳಿಕೆಗಳನ್ನೂ ನೀಡಬೇಡಿ’ ಎಂದು ಮುಖಂಡರಿಗೆ ‌ಮನವಿ‌ ಮಾಡಿದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

6 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

7 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

7 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

7 hours ago