ಬೆಂಗಳೂರು : ಮಹಾತ್ಮ ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
“ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಗಾಂಧಿ ಜಗತ್ತು ಕಂಡ ಅಪರೂಪದ ಸಂತ. ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ” ಎಂದು ಹೇಳಿದರು.
ʼಗಾಂಧಿ ಭಾರತದ ಆತ್ಮ. ಭಾರತದ ಪ್ರಜ್ಞೆ. ಇಲ್ಲಿ ಗೋಡ್ಸೆಗಳನ್ನು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರ ಮಾಡಲು ಅವಕಾಶ ಕೊಡಬಾರದು. ಕೋಮು ಶಕ್ತಿಗಳನ್ನು ಸೋಲಿಸಬೇಕು. ಕೋಮು ದುಷ್ಟಶಕ್ತಿಗಳು ರಾಜ್ಯದ, ದೇಶದ ಅಭಿವೃದ್ಧಿಗೆ ಮಾರಕ. ಬಿಜೆಪಿ ಅಧಿಕಾರದಲ್ಲಿ ಇದ್ದಾಗೆಲ್ಲಾ ಸಮಾಜವನ್ನು, ಜಾತಿ, ಧರ್ಮದ ಹೆಸರಲ್ಲಿ ವಿಭಜಿಸುತ್ತಿದ್ದರೇ ಹೊರತು ಜನಪರವಾದ, ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ರೂಪಿಸಲೇ ಇಲ್ಲ. ಜಾರಿ ಮಾಡಲೂ ಇಲ್ಲ. ಬಿಜೆಪಿಗೆ ಜನಪರ ಪ್ರಗತಿ ಮುಖ್ಯ ಅಲ್ಲವೇ ಅಲ್ಲʼ ಎಂದರು.
ನಾವು ಸರ್ವ ಜಾತಿ, ಜನಾಂಗ, ಧರ್ಮದವರಿಗೆ ಮತ್ತು ಸರ್ವ ವರ್ಗದವರ ಏಳೆಗೆಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಿದರೆ, ಈ ಜನಪರ ಕಾರ್ಯಕ್ರಮಗಳ ವಿರುದ್ಧ ತಪ್ಪು ಮಾಹಿತಿ ನೀಡಿ ಫಲಾನುಭವಿಗಳನ್ನು ಅವಮಾನಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…