ಬಿಜೆಪಿಯಿಂದಲೂ ಸ್ಥಿರ ಸರ್ಕಾರ ಅಸಾಧ್ಯ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ಸರ್ಕಾರ ಯಾರೇ ರಚನೆ ಮಾಡಿದರೂ ಸ್ಥಿರ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿ ಕಡೆ ಗಮನ ಕೊಡುತ್ತಾರೋ, ಚುನಾವಣೆ ಮಾಡೋಕೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಸ್ಥಿರವಾಗಿ ಇರಲು ಸಾಧ್ಯವಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ ನಾಯಕರು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಕೊಡದ ವಿಚಾರವಾಗಿ, ಆ ಬಗ್ಗೆ ಬಿಜೆಪಿಯವರನ್ನು ಕೇಳಿ ಎಂದರು. ಅತೃಪ್ತರ ವಿಚಾರ ಕುರಿತು,  ಕಾಂಗ್ರೆಸ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್​ ನಾಯಕ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್​ ಪಡೆದ ರಾಮಲಿಂಗಾರೆಡ್ಡಿ ಅವರಿಗೆ ಕೃತಜ್ಞತೆ ತಿಳಿಸಲು ಭೇಟಿ ಮಾಡಿರುವುದಾಗಿ ಎಚ್​ಡಿಕೆ ತಿಳಿಸಿದರು.

ಭೇಟಿ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ, “ಯಾವುದೇ ರಾಜಕೀಯ ಚರ್ಚೆ ಮಾಡಲು ಭೇಟಿ ಮಾಡಿಲ್ಲ. ರಾಜೀನಾಮೆ ನೀಡಿದ ಬಳಿಕ ನಮ್ಮ ಮನವಿ ಮೇರೆಗೆ ವಾಪಸ್ ಪಡೆದಿದ್ದರು. ನಾವು ಅವರಿಗೆ ಕೃತಜ್ಞತೆ ಸಲ್ಲಿಸಬೇಕಿತ್ತು. ನಮ್ಮ ಪರ‌ ಮತ ಹಾಕಿದ್ದರು. ಅಧಿವೇಶನದಲ್ಲಿ ಕೃತಜ್ಞತೆ ಸಲ್ಲಿಸಲು ಆಗಿರಲಿಲ್ಲ. ಇವತ್ತು ಬಂದು ಕೃತಜ್ಞತೆ ಸಲ್ಲಿಸಿದ್ದೇವೆ. ರಾಮಲಿಂಗಾರೆಡ್ಡಿ ಕಾಂಗ್ರೆಸ್​ನ ಹಿರಿಯ ನಾಯಕರು. ಪಕ್ಷದ ಬಗ್ಗೆ ಅವರಿಗಿರುವ ಕಾಳಜಿ  ಬಗ್ಗೆ ಹೆಮ್ಮೆ ಇದೆ,” ಎಂದರು.