ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂದಿನ ಸರ್ಕಾರ ಯಾರೇ ರಚನೆ ಮಾಡಿದರೂ ಸ್ಥಿರ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿ ಕಡೆ ಗಮನ ಕೊಡುತ್ತಾರೋ, ಚುನಾವಣೆ ಮಾಡೋಕೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಸ್ಥಿರವಾಗಿ ಇರಲು ಸಾಧ್ಯವಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಕೊಡದ ವಿಚಾರವಾಗಿ, ಆ ಬಗ್ಗೆ ಬಿಜೆಪಿಯವರನ್ನು ಕೇಳಿ ಎಂದರು. ಅತೃಪ್ತರ ವಿಚಾರ ಕುರಿತು, ಕಾಂಗ್ರೆಸ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಪಡೆದ ರಾಮಲಿಂಗಾರೆಡ್ಡಿ ಅವರಿಗೆ ಕೃತಜ್ಞತೆ ತಿಳಿಸಲು ಭೇಟಿ ಮಾಡಿರುವುದಾಗಿ ಎಚ್ಡಿಕೆ ತಿಳಿಸಿದರು.
ಭೇಟಿ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ, “ಯಾವುದೇ ರಾಜಕೀಯ ಚರ್ಚೆ ಮಾಡಲು ಭೇಟಿ ಮಾಡಿಲ್ಲ. ರಾಜೀನಾಮೆ ನೀಡಿದ ಬಳಿಕ ನಮ್ಮ ಮನವಿ ಮೇರೆಗೆ ವಾಪಸ್ ಪಡೆದಿದ್ದರು. ನಾವು ಅವರಿಗೆ ಕೃತಜ್ಞತೆ ಸಲ್ಲಿಸಬೇಕಿತ್ತು. ನಮ್ಮ ಪರ ಮತ ಹಾಕಿದ್ದರು. ಅಧಿವೇಶನದಲ್ಲಿ ಕೃತಜ್ಞತೆ ಸಲ್ಲಿಸಲು ಆಗಿರಲಿಲ್ಲ. ಇವತ್ತು ಬಂದು ಕೃತಜ್ಞತೆ ಸಲ್ಲಿಸಿದ್ದೇವೆ. ರಾಮಲಿಂಗಾರೆಡ್ಡಿ ಕಾಂಗ್ರೆಸ್ನ ಹಿರಿಯ ನಾಯಕರು. ಪಕ್ಷದ ಬಗ್ಗೆ ಅವರಿಗಿರುವ ಕಾಳಜಿ ಬಗ್ಗೆ ಹೆಮ್ಮೆ ಇದೆ,” ಎಂದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…