ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

Featured, ರಾಜ್ಯ ನ್ಯೂಸ್

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು ..

ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ ಕ್ಷಮಿಸುವುದಿಲ್ಲ : ಯು.ಟಿ.ಖಾದರ್

ಮಂಗಳೂರು: ಪ್ರತಿಪಕ್ಷವಾದ ಬಿಜೆಪಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಅಧಿವೇಶನ ನಡೆಸಲು ಅಡ್ಡಿ ಪಡಿಸುವ ಮೂಲಕ ಜನರಿಗೆ ಸಾಮಾಜಿಕ ವಂಚನೆ ಮಾಡುತ್ತಿದ್ದು, ಇದರ ಹಿಂದೆ ಹಿಡನ್ ಅಜೆಂಡಾ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ.

ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಬರ, ಅತಿವೃಷ್ಟಿಯ ಸಮಸ್ಯೆ ಇದೆ. ಇಂತಹ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ ಕ್ಷಮಿಸುವುದಿಲ್ಲ ಎಂದರು.

ಇದನ್ನೂ ಓದಿ :

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಸಚಿವ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಕುರಿತು ಪ್ರತಿಪಕ್ಷಕ್ಕೆ ಆಕ್ಷೇಪವಿದ್ದರೆ ಅದರ ಬಗ್ಗೆ ನೋಟೀಸು ನೀಡಿ ಚರ್ಚೆಗೆ ಅವಕಾಶ ಕೋರಬೇಕಿತ್ತು. ಸದನದ ಹೊರಗಡೆ ಈ ಬಗ್ಗೆ ಯಾವುದೇ ರಾಜಕೀಯ ಮಾಡಿದರೂ ಅದನ್ನು ಒಪ್ಪಬಹುದಿತ್ತು. ಆದರೆ, ನಾಗೇಂದ್ರ ಮೇಲಿನ ಆರೋಪದ ಕುರಿತಂತೆ ಈಗಾಗಲೇ ತನಿಖೆ ನಡೆಸಿರುವ ಸಂಸ್ಥೆ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಸಚಿವ ಸ್ಥಾನವನ್ನು ನೀಡಲಾಗಿದೆ. ಅದಕ್ಕೆ ಅವಕಾಶ ಇಲ್ಲವೆಂದಾಗಿದ್ದರೆ ರಾಜ್ಯಪಾಲರು ಪ್ರತಿಜ್ಞೆಯನ್ನು ಬೋಧಸುತ್ತಿದ್ದರೇ? ರಾಜ್ಯಪಾಲರಿಗೆ ಕಾನೂನಿನ ಅರಿವಿಲ್ಲವೇ ಅಥವಾ ಅವರಲ್ಲಿ ಕಾನೂನು ತಂಡ ಇಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ :

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ಅಧಿವೇಶನದ ಹೊರಗಡೆ ಪ್ರತಿಪಕ್ಷವು ಪಾದಯಾತ್ರೆ ಅಥವಾ ಯಾವುದೇ ರೀತಿಯ ರಾಜಕೀಯ ಮಾಡುವುದಕ್ಕೆ ಯಾರೂ ಆಕ್ಷೇಪಿಸುವುದಿಲ್ಲ. ಆದರೆ ಜನರ ಸಮಸ್ಯೆಗಳ ಚರ್ಚೆಯಾಗುವ ಅಧಿವೇಶನವನ್ನು ಅಡ್ಡಿಪಡಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದು ಹೇಳಿದ ಸಚಿವ ಯು.ಟಿ.ಖಾದರ್, ಸಂಸತ್ತಿನಲ್ಲಿ ಪ್ರತಿಪಕ್ಷದವರು ನೀಟ್ ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ನಡೆಸಿದ ಮಕ್ಕಳ ಮೇಲಿನ ದೌರ್ಜನ್ಯ, ಹಲ್ಲೆಗೆ ಸಂಬಂಧಿಸಿ ಪ್ರತಿಭಟನೆ ನಡೆಸಿರುವುದಕ್ಕೆ ಪ್ರತಿಯಾಗಿ ಇಲ್ಲಿ ಅಡ್ಡಿ ಪಡಿಸಲಾಗುತ್ತಿದೆಯೇ ವಿನಃ, ಸಚಿವ ನಾಗೇಂದ್ರ ಕಾರಣ ಅಲ್ಲ ಎಂಬುದನ್ನು ಬಿಜೆಪಿಯವರು ಸ್ಪಷ್ಟಪಡಿಸಲಿ ಎಂದರು.

Leave a Reply