ನವದೆಹಲಿ: ವ್ಯಾಪಕ ಚರ್ಚೆ ಬೆನ್ನಲ್ಲೇ ಭಾರತದ ಮುಂದಿನ ಉಪ ರಾಷ್ಟ್ರಪತಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಎನ್‌ಡಿಎ ಮೈತ್ರಿಕೂಟ ತೆರೆ ಎಳೆದಿದೆ. ಬಿಜೆಪಿಯಿಂದಲೇ ಮುಂದಿನ ಅಭ್ಯರ್ಥಿ ಆಯ್ಕೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸ ಮುಗಿಸಿ ವಾಪಸ್ ಆದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಮೂಲಗಳ ಪ್ರಕಾರ, ಬಿಜೆಪಿಯೊಂದಿಗೆ ಸೈದ್ಧಾಂತಿಕ ಹೊಂದಾಣಿಕೆ ಹಾಗೂ ಸಂಸದೀಯ ಕಾರ್ಯವಿಧಾನದಲ್ಲಿ ಹೆಚ್ಚಿನ ಅನುಭವ ಹೊಂದಿರುವ ವ್ಯಕ್ತಿಯನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈಗ ಆಯ್ಕೆಯಾಗುವ ರಾಷ್ಟ್ರಪತಿಗಳು 5 ವರ್ಷಗಳ ಅಧಿಕಾರವಧಿಯಲ್ಲಿ ಇರುತ್ತಾರೆ.
ಎನ್‌ಡಿಎ ಭಾಗವಾದ ಜೆಡಿ(ಯು) ನಿಂದ ಉಪ ರಾಷ್ಟ್ರಪತಿ ಹುದ್ದೆಗೆ ಯಾರೊಬ್ಬರೂ ಸ್ಪರ್ಧೆಯಲ್ಲಿಲ್ಲ. ಹೀಗಾಗಿ ತೆಲುಗು ದೇಶಂ ಪಕ್ಷ (TDP) ಮತ್ತು ಜೆಡಿ(ಯು) ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬಿಜೆಪಿಯಿಂದಲೇ ಅಭ್ಯರ್ಥಿ ಆಯ್ಕೆ ಮಾಡಲು ಒಮ್ಮತ ಸೂಚಿಸಿವೆ ಎಂದು ಹೇಳಲಾಗಿದೆ. ಸದ್ಯ ಪ್ರಧಾನಿ ಮೋದಿ ಅವರು ಬ್ರಿಟನ್, ಮಾಲ್ಡೀವ್ಸ್ ಪ್ರವಾಸದಲ್ಲಿದ್ದು, ವಾಪಸ್ ಬಂದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…