ಬಿಜೆಪಿಯಿಂದ ಮೈತ್ರಿ ಶಾಸಕರಿಗೆ ಆಮಿಷ : ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ :ಬಿಎಸ್ ವೈ – VIshwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೂ ಮುನ್ನಾ ತುರ್ತು ಪತ್ರಿಕಾಗೋಷ್ಠಿಯನ್ನು ಕರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮೈತ್ರಿ ಸರ್ಕಾರದ ಶಾಸಕರಿಗೆ ಆಮಿಷವೊಡ್ಡಿ ಸೆಳೆಯಲು ಯತ್ನಿಸುತ್ತಿರುವ ಆಡಿಯೋವನ್ನು ಬಿಡುಗಡೆ ಮಾಡಿದರು.

ಅಪರೇಷನ್ ಕಮಲದ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ ಸಿಎಂ ಅವರು ನನ್ನಲ್ಲಿ ಆಡಿಯೋ ಸಾಕ್ಷ್ಯವಿದೆ ಎಂದು ಹೇಳಿ 40 ನಿಮಿಷಗಳ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದರು.

ಆಪರೇಷನ್ ಕಮಲದ ಹಿಂದೆ ಮೋದಿ, ಅಮಿತ್ ಶಾ ಅವರ ಕೈವಾಡವಿದೆ. ಈ ಸಂಬಂಧ ಸ್ಪೀಕರ್ ಅವರಿಗೆ ಪತ್ರ ಬರೆದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ ಯಡಿಯೂರಪ್ಪ ಅವರು, ಶರಣಗೌಡ ಅವರ ಜತೆ ಮಾತನಾಡಿದ್ದೇನೆ ಎಂದು ಗೊಂದಲ ಸೃಷ್ಟಿಸುವುದು ಕುಮಾರಸ್ವಾಮಿ ಅವರ ಉದ್ದೇಶ. ನಾನು ಸ್ಪೀಕರ್ ಬಗ್ಗೆ ಮಾತನಾಡಿರುವುದಯ ನಿಜವಾದರೆ, ಕುಮಾರಸ್ವಾಮಿ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದರು.