ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 2018ರ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಹಾಲಿ ಶಾಸಕ ವಿ. ಸುನಿಲ್ ಕುಮಾರ್ ಅವರ ಹೆಸರು ಅಂತಿಮಗೊಂಡಿದೆ. ಎ. 8ರಂದು ಬಿಜೆಪಿ ಹೈಕಮಾಂಡ್ ಬಿಡುಗಡೆಗೊಳಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯ 72 ಮಂದಿಯ ಪೈಕಿ ಸುನಿಲ್ ಕುಮಾರ್ ಅವರ ಹೆಸರೂ ಸೇರಿದೆ. ಅವರು ಎ. 23ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಸಾಕಷ್ಟು ಕಾರ್ಯ ಕ್ರಮಗಳನ್ನು ಆಯೋಜಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದೆ. 34 ಗ್ರಾಮ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಕ್ಷೇತ್ರದಲ್ಲಿ 2 ಬಾರಿ ಕಾರ್ಯ ಕರ್ತರ ಸಮಾವೇಶ ಹಾಗೂ 1 ಬಾರಿ ಮಹಿಳಾ ಸಮಾವೇಶವನ್ನು ಕ್ಷೇತ್ರ ಮಟ್ಟದಲ್ಲಿ ಮಾಡಲಾಗಿದೆ. ಮಹಿಳಾ ಮೋರ್ಚಾ ಶಕ್ತಿಕೇಂದ್ರದ ಸಮಾವೇಶಗಳು ನಡೆಯುತ್ತಿವೆ. ಬೆಳ್ಮಣ್, ಬಜಗೋಳಿ, ಕಾರ್ಕಳ ನಗರ, ಹೆಬ್ರಿ ಮೊದಲಾದ ಭಾಗದಲ್ಲಿ ಮುಕ್ತಾಯಗೊಂಡಿದೆ. ಎ. 13ರಂದು ಮತ್ತೂಂದು ದೊಡ್ಡಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಕಳದಲ್ಲಿ ನಡೆಯಲಿದೆ.
4ನೇ ಬಾರಿಗೆ ಸ್ಪರ್ಧೆ
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ವಿ. ಸುನಿಲ್ ಕುಮಾರ್ ಅವರು ನಾಲ್ಕನೇ ಬಾರಿಗೆ ಸ್ಪರ್ಧಿಸು ತ್ತಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ವಿ. ಸುನಿಲ್ ಕುಮಾರ್ ಅವರು ಎಚ್. ಗೋಪಾಲ ಭಂಡಾರಿ ಅವರ ವಿರುದ್ಧ ಜಯಗಳಿಸಿದ್ದು, 2008ರಲ್ಲಿ ಭಂಡಾರಿ ವಿರುದ್ಧ ಪರಾಜಿತ ಗೊಂಡಿದ್ದರು. 2013ರಲ್ಲಿ ಮತ್ತೂಮ್ಮೆ ಭಂಡಾರಿ ವಿರುದ್ಧ ಜಯಗಳಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಪ್ರಾರಂಭದಿಂದಲೂ ಒಂದೇ ಹೆಸರು!
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 2018ರ ಚುನಾವಣೆಗೆ ಬಿಜೆಪಿಯಿಂದ ಹಾಲಿ ಶಾಸಕ ವಿ. ಸುನಿಲ್ ಕುಮಾರ್ ಅವರ ಹೆಸರು ಕೇಳಿ ಬರುತ್ತಿತ್ತು. ಆದರೆ ಕೆಲವು ಸಂದರ್ಭಲ್ಲಿ ಸುನಿಲ್ ಅವರು ಮೂಡಬಿದಿರೆ ಕ್ಷೇತ್ರದಿಂದ ಅಥವಾ ಉಡುಪಿಯಿಂದ ಸ್ಪರ್ಧಿಸುತ್ತಾರೆ ಎನ್ನುವ ಮಾತು ಹರಿದಾಡುತ್ತಿತ್ತಾದರೂ ಅದು ಗಾಳಿ ಸುದ್ದಿ ಎನ್ನಲಾಗುತ್ತಿತ್ತು. ರವಿವಾರ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಲೇ ವಿ. ಸುನಿಲ್ ಅವರ ಸ್ಫರ್ಧೆ ಖಚಿತಗೊಂಡಿದ್ದು, ಕಾರ್ಯಕರ್ತರು ಉತ್ಸುಕರಾಗಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…