ಹುಬ್ಬಳ್ಳಿ : ”ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಪಕ್ಷದ ಎಲ್ಲಾ ಪ್ರಮುಖರನ್ನು ನಾನು ಭೇಟಿಯಾಗಿದ್ದೇನೆ. ಟಿಕೆಟ್ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದೇನೆ. ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ” ಎಂದು ಮುತಾಲಿಕ್ ತಿಳಿಸಿದ್ದಾರೆ.
”ನನಗೆ ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಲಭಿಸುವ ಸಾಧ್ಯತೆ ಶೇ 90ರಷ್ಟು ಇದೆ. ಆದರೆ ರಾಜಕೀಯದಲ್ಲಿ ಕೊನೆ ಘಳಿಗೆಯಲ್ಲೂ ಯಾವುದೇ ಬದಲಾವಣೆಯಾಗುವುದು ಸಹಜ” ಎಂದೂ ಹೇಳಿದ್ದಾರೆ.
”ಒಂದು ವೇಳೆ ಕೊನೆ ಕ್ಷಣದ ಬದಲಾವಣೆಯಿಂದಾಗಿ ನನಗೆ ಟಿಕೆಟ್ ಲಭಿಸದೆ ಬೇರೆಯವರಿಗೆ ಸಿಕ್ಕರೆ ನಾನು ಅವರ ಪರವಾಗಿ ಪ್ರಚಾರ ಮಾಡಲು ಕರೆದರೆ ಹೋಗುತ್ತೇನೆಯೇ ಹೊರತು ಪಕ್ಷದ ವಿರುದ್ದವಾಗಿ ಪಕ್ಷೇತರವಾಗಿಯಂತೂ ಸ್ಪರ್ಧಿಸಲಾರೆ” ಎಂದು ತಿಳಿಸಿದ್ದಾರೆ.
ಇನ್ನು, ”ಇದು ನನ್ನ ರಾಜಕೀಯದ ಕೊನೆಯ ಜೀವನವಾಗಿದೆ. ಇನ್ನೂ ಸ್ಪಲ್ಪ ಸಮಯದಲ್ಲೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದೂ ಮಾಹಿತಿ ನೀಡಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…