Featured

ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ : ಪ್ರಮೋದ ಮುತಾಲಿಕ್ -Vishwanews24

ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ : ಪ್ರಮೋದ ಮುತಾಲಿಕ್ -Vishwanews24

ಹುಬ್ಬಳ್ಳಿ : ”ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಪಕ್ಷದ ಎಲ್ಲಾ ಪ್ರಮುಖರನ್ನು ನಾನು ಭೇಟಿಯಾಗಿದ್ದೇನೆ. ಟಿಕೆಟ್‌ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದೇನೆ. ಟಿಕೆಟ್‌ ನೀಡುವ ಭರವಸೆ ನೀಡಿದ್ದಾರೆ” ಎಂದು ಮುತಾಲಿಕ್‌ ತಿಳಿಸಿದ್ದಾರೆ.

”ನನಗೆ ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಲಭಿಸುವ ಸಾಧ್ಯತೆ ಶೇ 90ರಷ್ಟು ಇದೆ. ಆದರೆ ರಾಜಕೀಯದಲ್ಲಿ ಕೊನೆ ಘಳಿಗೆಯಲ್ಲೂ ಯಾವುದೇ ಬದಲಾವಣೆಯಾಗುವುದು ಸಹಜ” ಎಂದೂ ಹೇಳಿದ್ದಾರೆ.

”ಒಂದು ವೇಳೆ ಕೊನೆ ಕ್ಷಣದ ಬದಲಾವಣೆಯಿಂದಾಗಿ ನನಗೆ ಟಿಕೆಟ್‌ ಲಭಿಸದೆ ಬೇರೆಯವರಿಗೆ ಸಿಕ್ಕರೆ ನಾನು ಅವರ ಪರವಾಗಿ ಪ್ರಚಾರ ಮಾಡಲು ಕರೆದರೆ ಹೋಗುತ್ತೇನೆಯೇ ಹೊರತು ಪಕ್ಷದ ವಿರುದ್ದವಾಗಿ ಪಕ್ಷೇತರವಾಗಿಯಂತೂ ಸ್ಪರ್ಧಿಸಲಾರೆ” ಎಂದು ತಿಳಿಸಿದ್ದಾರೆ.

ಇನ್ನು, ”ಇದು ನನ್ನ ರಾಜಕೀಯದ ಕೊನೆಯ ಜೀವನವಾಗಿದೆ. ಇನ್ನೂ ಸ್ಪಲ್ಪ ಸಮಯದಲ್ಲೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದೂ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 minutes ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

48 minutes ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

54 minutes ago

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…

1 hour ago

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…

1 hour ago

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

2 hours ago