Featured

ಬಿಜೆಪಿಯೇ ಒಂದು ಭ್ರಷ್ಟ ಪಕ್ಷ, ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ : ಸಿದ್ದರಾಮಯ್ಯ -Vishwanews24

ಬಿಜೆಪಿಯೇ ಒಂದು ಭ್ರಷ್ಟ ಪಕ್ಷ, ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ : ಸಿದ್ದರಾಮಯ್ಯ -Vishwanews24

ಯಡಿಯೂರಪ್ಪ ಅವರು ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರುವುದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ..

ರಾಜ್ಯಕ್ಕೆ ಹೊಸ ಸಿಎಂ ಬಂದರೂ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡವ ನಮ್ಮ ಹೋರಾಟ ಮುಂದುವರಿಯಲಿದೆ…

ಗದಗ: ಯಡಿಯೂರಪ್ಪ ರಾಜ್ಯ ಕಂಡ ಕಡು ಭ್ರಷ್ಟ ಮುಖ್ಯಮಂತ್ರಿ, ಅವರು ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರುವುದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸ್ವ ಕ್ಷೇತ್ರ ಬಾದಾಮಿಗೆ ಹೋಗುವ ಮುನ್ನ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದರು. ಬಿಜೆಪಿಯೇ ಒಂದು ಭ್ರಷ್ಟ ಪಕ್ಷ, ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ. ಯಡಿಯೂರಪ್ಪ ಕರ್ನಾಟಕ ಕಂಡ ಒಬ್ಬ ಭ್ರಷ್ಟ ಮುಖ್ಯಮಂತ್ರಿ, ಇನ್ನೊಬ್ಬ ಬಂದರೂ ಭ್ರಷ್ಟ ಮುಖ್ಯಮಂತ್ರಿಯೇ ಆಗಿರುತ್ತಾರೆ ಎಂದು ಟೀಕಿಸಿದರು.

ಮುಂದಿನ ಸಿಎಂ ಯಾರಾಗಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನೇನು ಬಿಜೆಪಿ ಅಧ್ಯಕ್ಷನೇ? ಅದು ಅವರ ಪಕ್ಷದ ವಿಚಾರ ಎಂದು ಉತ್ತರಿಸಿದರು. ಯಡಿಯೂರಪ್ಪನವರ ಪರ ಸ್ವಾಮೀಜಿಗಳು ನಿಂತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸ್ವಾಮೀಜಿಗಳು ರಾಜಕಾರಣದಲ್ಲಿ ಬರದೇ ಇರುವುದು ಒಳ್ಳೆಯದು, ಧರ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತ ಇರಬೇಕು ಎಂದು ಹೇಳಿದರು.

ರಾಜ್ಯಕ್ಕೆ ಹೊಸ ಸಿಎಂ ಬಂದರೂ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡವ ನಮ್ಮ ಹೋರಾಟ ಮುಂದುವರಿಯಲಿದೆ. ಕಾಂಗ್ರೆಸ್ ವಲಸಿಗರ ಪರಿಸ್ಥಿತಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷ ಬಿಟ್ಟು ಬಿಜೆಪಿಗೆ ಹೋದವರಿಗೆ ಜನ ಪಾಠ ಕಲಿಸುತ್ತಾರೆ ಎಂದು ಗುಡುಗಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago