Featured

ಬಿಜೆಪಿಯ ಅಧಿಕಾರ ದುರ್ಬಳಕೆ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ :  ಡಿಕೆಶಿ – vishwanews24

ಬಿಜೆಪಿಯ ಅಧಿಕಾರ ದುರ್ಬಳಕೆ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ :  ಡಿಕೆಶಿ

ಬೆಂಗಳೂರು: ‘ಬಿಜೆಪಿಯವರು ಅಧಿಕಾರ ದುರುಪಯೋಗ, ಚುನಾವಣೆ ಆಯೋಗದ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ ಮಾಡ್ತಿದ್ದಾರೆ’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಆಗಸ್ಟ್ 5ರಂದು ರಾಹುಲ್ ಗಾಂಧಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ‘ನಮ್ಮ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಿಜೆಪಿ ಅವರು ಯಾವ ರೀತಿ ಅಧಿಕಾರ ದುರುಪಯೋಗ ಮಾಡಿಕೊಂಡು, ಎಲೆಕ್ಷನ್ ಕಮಿಷನ್ ಉಪಯೋಗ ಮಾಡಿಕೊಂಡು ಹೆಚ್ಚು ಕಡಿಮೆ ಮಾಡಿದ್ರು ಅನ್ನೋದನ್ನ ನಾವು ಬೆಳಕಿಗೆ ತರಬೇಕಿದೆ. ನಮ್ಮ ಪಕ್ಷದಿಂದ ಈ ಬಗ್ಗೆ ರಿಸರ್ಚ್ ಆಗಿದೆ. ನಮ್ಮ ನಾಯಕರು ರಾಜ್ಯದ ಜನತೆಗೆ ಈ ವಿಚಾರವನ್ನು ತಿಳಿಸುತ್ತಾರೆ. ನೀವು, ನಾವು ಎಚ್ಚರಿಕೆ ವಹಿಸಬೇಕು ಅನ್ನೋ ದೃಷ್ಟಿಯಿಂದ ನಾವು ಪ್ರತಿಭಟನೆ ಮಾಡ್ತಿದ್ದೇವೆ’ ಎಂದು ತಿಳಿಸಿದ್ದಾರೆ.

‘ಈಗ ದೇಶದಲ್ಲಿ ಆಗಿರೋದು ಆಗಿ ಹೋಗಿದೆ. ಆದರೆ ಈ ವಿಚಾರ ಜನರಿಗೆ ಗೊತ್ತಾಗಬೇಕು. ಅದಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ. ನಿನ್ನೆ ಪ್ರಾಥಮಿಕ ಸಭೆ ಆಗಿದೆ. ಇವತ್ತು ಸುರ್ಜೇವಾಲ, ವೇಣುಗೋಪಾಲ್ ಬರುತ್ತಿದ್ದಾರೆ’ ಎಂದಿದ್ದಾರೆ.

‘ರ‍್ಯಾಲಿ ಮಾಡಬೇಕಾ? ಸಮಾವೇಶ ಮಾಡಬೇಕಾ ಎಂದು ಚರ್ಚೆ ಇದೆ. ಕೋರ್ಟ್ ತೀರ್ಪು ಕೂಡಾ ಪ್ರತಿಭಟನೆ, ರ‍್ಯಾಲಿಗೆ ಸಂಬಂಧಿಸಿದಂತೆ ಇದೆ. ನಮ್ಮ ಸರ್ಕಾರದ ಆದೇಶ ಇದೆ. ಇದರ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಸಿಎಂ ಜೊತೆ ಡೆಲ್ಲಿಯವರು ಮಾತಾಡಿದ್ದಾರೆ. ನಾನು ಮಾತಾಡಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago