Featured

ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ , ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ : ಡಿಕೆ ಶಿವಕುಮಾರ್ -Vishwanews24

  • ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ , ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ ..

  • ಪ್ರಿಯಾಂಕಾ ಗಾಂಧಿಯವರೇ ಇಡೀ ದೇಶದ ಜನ ನಿಮ್ಮ ಹಿಂದೆ ಇದ್ದಾರೆ. ನೀವು ಮುನ್ನುಗ್ಗಿ, ನಿಮ್ಮ ಬೆನ್ನ ಹಿಂದೆ ನಾವು ಇದ್ದೇವೆ..

  • : ಡಿಕೆ ಶಿವಕುಮಾರ್ -Vishwanews24

ಬೆಂಗಳೂರು: ‘ಉತ್ತರ ಪ್ರದೇಶದಲ್ಲಿ ನಡೆದ ಘಟನೆಗೆ ನೈತಿಕ ಹೊಣೆ ಹೊತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಅನ್ನದಾತ ತನ್ನ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾನೆ. ಕೇಂದ್ರ ಸಚಿವ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ರೈತರನ್ನು ಕೊಲೆ ಮಾಡಲಾಗಿದೆ. ಈ ದೇಶ ಯಾವ ಕಡೆ ಹೋಗುತ್ತಿದೆ ಎಂಬ ಆತಂಕ ಆಗುತ್ತಿದೆ. ತಕ್ಷಣ ಅವರಿಬ್ಬರೂ ರಾಜೀನಾಮೆ ಕೊಟ್ಟು, ಕ್ಷಮೆ ಕೇಳಬೇಕಿತ್ತು’ ಎಂದರು.

‘ಇದು ಕೇವಲ ನಾಲ್ವರು ರೈತರ ಕೊಲೆ ಅಲ್ಲ. ಇಡೀ ದೇಶದ ರೈತರ ಕೊಲೆ. ಪ್ರಜಾಪ್ರಭುತ್ವದ ಕೊಲೆ. ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಭಾನುವಾರ ಮಧ್ಯರಾತ್ರಿ ಆ ಸ್ಥಳಕ್ಕೆ ಹೋಗುವಾಗ ಪೊಲೀಸರು ಅವರನ್ನು ಎಳೆದಾಡಿ, ತಡೆದಿದ್ದಾರೆ. ಯಾವ ದೇಶದಲ್ಲಿ ನಾವಿದ್ದೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇಡೀ ದೇಶದಲ್ಲಿ ರೈತ ಸಿಡಿದೆದ್ದಿದ್ದಾನೆ. ಇಂಥ ರೈತರ ಸಾವಾದಾಗ ಅಲ್ಲಿಗೆ ಹೋಗಲು ಮುಂದಾದ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಎಳೆದಾಡಿದ್ದಾರೆ. ಇಡೀ ದೇಶ ಪ್ರಿಯಾಂಕಾ ಅವರ ಗಾಂಧಿ ಬೆನ್ನ ಹಿಂದಿದೆ. ಸತ್ತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಮುಂದಾಗಿದ್ದರು. ಸಾಂತ್ವನ ಹೇಳುವುದು ನಮ್ಮ ಸಂಸ್ಕೃತಿ. ಎಳೆದಾಡಿ ತಡೆಯುವುದು ಬಿಜೆಪಿ ಸಂಸ್ಕೃತಿ. ಸರ್ವಾಧಿಕಾರಿ ಆಡಳಿತ ದೇಶದಲ್ಲಿ ನಡೆಯುತ್ತಿದೆ. ಹಿಟ್ಲರ್ ಮಾದರಿಯ ಆಡಳಿತ ನಡೆಯುತ್ತಿದೆ. ರಾಮ ರಾಜ್ಯ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ರಾವಣ ರಾಜ್ಯ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ – Vishwanews24

‘ದೇಶದ ಅನ್ನದಾತನ ಶಾಂತಿಯುತ ಪ್ರತಿಭಟನೆ ಸಹಿಸಲಿಲ್ಲ. ಅನ್ನದಾತರನ್ನು ಒಬ್ಬ ಕೇಂದ್ರ ಸಚಿವನೂ ಭೇಟಿ ಮಾಡಲಿಲ್ಲ. ಬಿಜೆಪಿ ಸರ್ಕಾರ ರೈತರ ಮಾತುಕತೆಗೂ ಕರೆಯದೇ ಇಂಥ ಕೃತ್ಯ ನಡೆಸಿರುವುದು ಖಂಡನೀಯ. ಆಡಳಿತದಲ್ಲಿ ಬಿಜೆಪಿಯವರು ಬ್ರಿಟಿಷರಿಗಿಂತ ಮೇಲು. ಬ್ರಿಟಿಷರಾದರೂ ಕಡೆಗೆ ತಲೆಬಾಗಿ ಓಡಿ ಹೋದರು. ಆದರೆ, ಈ ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ. ಪ್ರಿಯಾಂಕಾ ಗಾಂಧಿಯವರೇ ಇಡೀ ದೇಶದ ಜನ ನಿಮ್ಮ ಹಿಂದೆ ಇದ್ದಾರೆ. ನೀವು ಮುನ್ನುಗ್ಗಿ, ನಿಮ್ಮ ಬೆನ್ನ ಹಿಂದೆ ನಾವು ಇದ್ದೇವೆ. ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ’ ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹ್ಮದ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಇದ್ದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

10 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

10 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

11 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

12 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

15 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

15 hours ago